ಬೆಂಗಳೂರು,
ಲೋಕಸಭಾ ಚುನಾವಣೆಯ ರಾಜ್ಯದ ಮೊದಲ ಹಂತದಲ್ಲಿ ರಾಜ್ಯದ ೧೪ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕಡೆಯ ದಿನ, ನಿನ್ನೆ ವಿವಿಧ ರಾಜಕೀಯ ಪಕ್ಷಗಳ ಹಾಗೂ ಸ್ವತಂತ್ರ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಆಗಿವೆ ಎಂದು ವರದಿಯಾಗಿದೆ.
ಉಮೇದುವಾರಿಕೆ ಸಲ್ಲಿಸಿದವರಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮೈಸೂರು ರಾಜ ವಂಶಸ್ಥ ಯದುವೀರ್ ಕೃಷ್ಣರಾಜದತ್ತ ಒಡೆಯರ್, ಮಾಜಿ ಸಚಿವ ವಿ.ಸೋಮಣ್ಣ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಬೆಂಗಳೂರು ಉತ್ತರ ಲೋಕಷಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೋ. ಎಂ.ವಿ. ರಾಜೀವ್ ಗೌಡ ಪ್ರಮುಖರಾಗಿದ್ದಾರೆ.
ತುಮಕೂರು ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ರೋಡ್ ಶೋ ನಡೆಸಿದ ಬಳಿಕ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ನಾಮಪತ್ರ ಸಲ್ಲಿಸಿದರು. ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ತಮ್ಮ ನಾಮಪತ್ರ ಸಲ್ಲಿಸಿದರು.
ಮೈಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
