ಉಜ್ಜನಿ, 10 ಮೇ :
ಆ್ಯಂಕರ್: ಉಜ್ಜನಿ ಗ್ರಾಮದಲ್ಲಿ ನಡೆಯುವ ಶ್ರೀಮರುಳಸಿದ್ದೇಶ್ವರ ಸ್ವಾಮಿಯ ರಥೋತ್ಸವ ಹಾಗೂ ದೇವಸ್ಥಾನದ ಶಿಖರ ತೈಲಾಭಿμÉೀಕ ಪ್ರಯುಕ್ತ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮೇ 12ರ ಬೆಳಿಗ್ಗೆ 06 ಗಂಟೆಯಿಂದ ಮೇ 13ರ ಮಧ್ಯರಾತ್ರಿ 10 ಗಂಟೆಯವರೆಗೆ ಉಜ್ಜಿನಿ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಮದ್ಯದಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಹಾಗೂ ಮದ್ಯ ಮಾರಾಟ, ಸಾಗಾಣಿಕೆ ಮಾಡದಂತೆ ನಿμÉೀಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ತಿಳಿಸಿದ್ದಾರೆ.
