ಲೋಕಸಭೆ ಚುನಾವಣೆ ಹತ್ತಿರವಿರುವಾಗಲೇ ಕರ್ನಾಟಕಕ್ಕೆ ವಂದೇ ಭಾರತ್ ರೈಲನ್ನು ಕೊಡುಗೆಯಾಗಿ ನೀಡಲಾಗಿದೆ. ಇಂದು ಮಾರ್ಚ್ 9ರಂದು ಕರ್ನಾಟಕದ ಹೊಸ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.
ಕಲಬುರಗಿ – ಬೈಯ್ಯಪ್ಪನಹಳ್ಳಿ ಮಧ್ಯೆ ಸಂಚಾರ
ನೂತನ ಕಲಬುರಗಿ- ಬೆಂಗಳೂರು ರೈಲು ಕಲಬುರಗಿಯಿಂದ ಸಂಜೆ 5 ಗಂಟೆಗೆ ಹೊರಟು ಮರುದಿನ ಮುಂಜಾನೆ 4:15 ಗಂಟೆಗೆ ಬೆಂಗಳೂರು ಸಮೀಪದ ಬೈಯ್ಯಪ್ಪನಹಳ್ಳಿಯಲ್ಲಿನೂತನವಾಗಿ ನಿರ್ಮಾಣಗೊಂಡಿರುವ ಸರ್ ಎಂ.ವಿಶ್ವೇಶ್ವರಯ್ಯ ರೈಲು ನಿಲ್ದಾಣಕ್ಕೆ ತಲುಪಲಿದೆ. ಇಂದು ಸಂಜೆ 5 ಗಂಟೆಗೆ ಕಲಬುರಗಿಯಲ್ಲಿ ರೈಲು ಸಂಚಾರದ ಉದ್ಘಾಟನೆಯಾಗಲಿದೆ.
