ಕಳೆದ ಕೆಲವು ದಿನಗಳಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕರಾವಳಿ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಮಲೆನಾಡು ಮತ್ತು ದಕ್ಷಿಣ ಕನ್ನಡ, ಉಡುಪಿ, ಕಾರವಾರ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
BulletsIn
- ಕರಾವಳಿ ಪ್ರದೇಶಗಳಲ್ಲಿ ನಿರಂತರ ಮಳೆ
- ಜನಜೀವನ ಅಸ್ತವ್ಯಸ್ತ
- ಶಾಲಾ, ಕಾಲೇಜುಗಳಿಗೆ ರಜೆ
- ದಕ್ಷಿಣ ಕನ್ನಡ, ಉಡುಪಿ, ಕಾರವಾರದಲ್ಲಿ ಮಳೆ ಮುಂದುವರಿಕೆ
- ಮಲೆನಾಡಿನ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ
- ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
- ಬೆಂಗಳೂರಿನಲ್ಲಿ ಕೆಲವು ಕಡೆ ಹಗುರ ಮಳೆ
- ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ದಿನ ಭಾರಿ ಮಳೆಯ ಮುನ್ಸೂಚನೆ
- ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ
- ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಹವಾಮಾನ ಇಲಾಖೆ ಮಾಹಿತಿ
