ನವದೆಹಲಿ, 9 ಫೆಬ್ರವರಿ :
ಆ್ಯಂಕರ್ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ದೆಹಲಿಯಲ್ಲಿ ಪಕ್ಷ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿಯಾಗಿ ಮಾತುಕತೆ ನಡೆಸಿದರು. ಇದೇ ವೇಳೆ, ರಾಜ್ಯದಲ್ಲಿ ಪಕ್ಷದ ಸಂಘಟನಾ ಚಟುವಟಿಕೆಗಳು ಹಾಗೂ ಚುನಾವಣಾ ಸಿದ್ಧತಾ ಕಾರ್ಯಗಳ ಕುರಿತು ಮಾಹಿತಿ ಒದಗಿಸಿ ಚರ್ಚಿಸಲಾಯಿತು ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ಲೋಕಸಭೆ ಚುನಾವಣೆಗೆ ಸಿದ್ಧತೆ ಭರದಿಂದ ಸಾಗುತ್ತಿರುವ ನಡುವೆಯೇ ವಿಜಯೇಂದ್ರ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.
