ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವ ಗಂಭೀರ ಉದ್ದೇಶದೊಂದಿಗೆ, “ಜಾಗತಿಕವಾಗಿ ಪ್ರಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು” ಎಂಬ ಘೋಷವಾಕ್ಯದಡಿಯಲ್ಲಿ, ಮೇ 22ರಿಂದ ಜೂನ್ 5ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ಪೂರ್ವ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಅಭಿಯಾನದ ಮೂಲಕ ಪ್ಲಾಸ್ಟಿಕ್ ತ್ಯಾಜ್ಯದಿಂದ ಉಂಟಾಗುವ ಹಾನಿಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ತಿಳಿಸಿದ್ದಾರೆ.
BulletsIn
-
ಮೇ 22ರಿಂದ ಜೂನ್ 5ರವರೆಗೆ ಪ್ಲಾಸ್ಟಿಕ್ ಮಾಲಿನ್ಯ ನಿಗ್ರಹಕ್ಕಾಗಿ ಪೂರ್ವ ಅಭಿಯಾನವನ್ನು ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ನಡೆಸಲಾಗುತ್ತದೆ.
-
“ಜಾಗತಿಕವಾಗಿ ಪ್ರಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು” ಎಂಬ ಘೋಷವಾಕ್ಯದೊಂದಿಗೆ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ.
-
ಪ್ಲಾಸ್ಟಿಕ್ ತ್ಯಾಜ್ಯದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶವಿದೆ.
-
ಶ್ರಮದಾನ, ಸಂವಾದ ಸಭೆ, ಜಾಗೃತಿ ಕಾರ್ಯಕ್ರಮಗಳ ಮೂಲಕ ಅಭಿಯಾನಕ್ಕೆ ಜೀವ ತುಂಬಲಾಗುತ್ತದೆ.
-
ಜಲಮೂಲಗಳ ಸುತ್ತುಮುತ್ತ ಶುದ್ಧಗೊಳಿಸುವ ಕಾರ್ಯಗಳಿಗೆ ಆದ್ಯತೆ ನೀಡಲಾಗುತ್ತದೆ.
-
ಬ್ಲಾಕ್ ಸ್ಪಾಟ್ (ಕಸದ ತ್ಯಾಜ್ಯ ನಿಕಾಸಿ ಸ್ಥಳ) ಗುರುತಿಸಿ ಸ್ವಚ್ಚಗೊಳಿಸಲಾಗುವುದು.
-
ಚರಂಡಿ ಶುದ್ಧೀಕರಣ ಹಾಗೂ ಅದರಲ್ಲಿ ಪ್ಲಾಸ್ಟಿಕ್ ಎಸೆಯದಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗುವುದು.
-
ಏಕ ಬಳಕೆಯ ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ, ವಿತರಣೆಯಲ್ಲಿ ತೊಡಗಿರುವ ಅಂಗಡಿಗಳ ತಪಾಸಣೆ ಮಾಡಲಾಗುತ್ತದೆ.
-
ಬಳಕೆಯಾದ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿ, ವಿಂಗಡಿಸಿ ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲಾಗುತ್ತದೆ.
-
ಈ ಅಭಿಯಾನದಲ್ಲಿ ಜನಪ್ರತಿನಿಧಿಗಳು, ಯುವಕರು, ಮಹಿಳಾ ಸ್ವಸಹಾಯ ಸಂಘಗಳು, ಗ್ರಾಮ ಸಮಿತಿಗಳು ಹಾಗೂ ಸ್ವಯಂಸೇವಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಲಾಗಿದೆ.
