ಬೆಂಗಳೂರು, 23 ಜನವರಿ(ಹಿ.ಸ):
ಆ್ಯಂಕರ್ :
ಅಯೋಧ್ಯೆಯ ನೂತನ ರಾಮ ಮಂದಿರದಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠೆ ನೆರವೇರಿದ್ದು, ಇಂದಿನಿಂದ ಸಾರ್ವಜನಿಕರೂ ಬಾಲ ರಾಮನ ದರ್ಶನ ಪಡೆಯಬಹುದಾಗಿದೆ. ಇದರೊಂದಿಗೆ, ವಿವಿಧ ರಾಜ್ಯಗಳಿಂದ ಅಯೋಧ್ಯೆಗೆ ತೆರಳುವವರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ. ಕರ್ನಾಟಕದಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಅಯೋಧ್ಯೆಗೆ ಭೇಟಿ ನೀಡುವ ನಿರೀಕ್ಷೆ ಇದೆ. ಕರ್ನಾಟಕ ಮತ್ತು ಗೋವಾವನ್ನು ಅಯೋಧ್ಯಾ ಧಾಮದೊಂದಿಗೆ ಸಂಪರ್ಕಿಸಲು ನೈಋತ್ಯ ರೈಲ್ವೆ ‘ಆಸ್ತಾ ಸ್ಪೆಷಲ್ ಎಕ್ಸ್ಪ್ರೆಸ್’ ವಿಶೇಷ ರೈಲುಗಳನ್ನು ಓಡಿಸಲಿದೆ.
ಎರಡು ರೈಲುಗಳು ಮೈಸೂರಿನಿಂದ (ಎಸ್ಎಂವಿಟಿ ಬೆಂಗಳೂರು ಮೂಲಕ), ಮತ್ತು ಎಸ್ಎಂವಿಟಿ ಬೆಂಗಳೂರು, ತುಮಕೂರು, ಚಿತ್ರದುರ್ಗ, ಬೆಳಗಾವಿ (ಧಾರವಾಡ ಮತ್ತು ಹುಬ್ಬಳ್ಳಿ ಮೂಲಕ) ಮತ್ತು ವಾಸ್ಕೋಡಗಾಮಾ (ರತ್ನಗಿರಿ ಮತ್ತು ಪನ್ವೇಲ್) ಮೂಲಕ ತಲಾ ಒಂದು ರೈಲು ಅಯೋಧ್ಯೆಗೆ ಸಂಚರಿಸಲಿದೆ.
ಪ್ರಯಾಣಿಕರು ಇಂಡಿಯನ್ ರೈಲ್ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (ಐಆರ್ಸಿಟಿಸಿ ಅಪ್ಲಿಕೇಶನ್ ಅಥವಾ ವೆಬ್ಸೈಟ್) ಮೂಲಕ ಟಿಕೆಟ್ಗಳನ್ನು ಕಾಯ್ದಿರಿಸಬೇಕು. ಕೌಂಟರ್ನಲ್ಲಿ ಯಾವುದೇ ಟಿಕೆಟ್ಗಳನ್ನು ನೀಡಲಾಗುವುದಿಲ್ಲ ಎಂದು ನೈಋತ್ಯ ರೈಲ್ವೆ ಈಗಾಗಲೇ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್
