
ಕಲಬುರಗಿ, 24 ಡಿಸೆಂಬರ್(ಹಿ.ಸ):
ಆ್ಯಂಕರ್ :
ಕಾಂಗ್ರೆಸ್ ಮುಖಂಡ ಬಸವರಾಜ್ ಚೌಲ್ ಅವರ ಪುತ್ರನ ಬರ್ಬರ ಕೊಲೆಯಾಗಿದೆ. ಆಳಂದ ಶಾಸಕ ಬಿ.ಆರ್.ಪಾಟೀಲ್ ಆಪ್ತ ಬಸವರಾಜ್ ಚೌಲ್ ಪುತ್ರನನ್ನು ನಡು ರಸ್ತೆಯಲ್ಲಿ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಕಲಬುರಗಿ ಜಿಲ್ಲೆ ಆಳಂದ ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಚಂದ್ರಶೇಖರ್ ಚೌಲ್(21) ಬರ್ಬರ ಕೊಲೆ ಮಾಡಿದ್ದಾರೆ. ಸ್ನೇಹಿತರಿಂದಲೇ ಚಂದ್ರಶೇಖರ್ ಚೌಲ್ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.ಸದ್ಯ ಘಟನಾ ಸ್ಥಳಕ್ಕೆ ಆಳಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
