ಬಳ್ಳಾರಿ, 18 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ತಾಲ್ಲೂಕಿನ ಕುಡತಿನಿ ಗ್ರಾಮದ ಕೆಐಎಡಿಬಿ ಕೈಗಾರಿಕಾ ಪ್ರದೇಶ ಹಂತ-2 ರಲ್ಲಿ ವಾರ್ಷಿಕ 2,16,000 ಟನ್ ಉತ್ಪಾದನಾ ಸಾಮಥ್ರ್ಯದೊಂದಿಗೆ `ಕೋಲ್ಡ್ ರೋಲ್ಡ್ ಗ್ರೇನ್ ಓರಿಯೆಂಟೆಡ್’ ಸ್ಟೀಲ್ ಪ್ಲಾಂಟ್ ಘಟಕವನ್ನು ಒಟ್ಟು 200 ಎಕರೆ (80.9 ಹೆಕ್ಟೇರ್) ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಎರಡು ಹಂತಗಳಲ್ಲಿ ಸ್ಥಾಪನೆ ಮಾಡಲು ಮೆ.ಜೆ.ಎಸ್.ಡಬ್ಲ್ಯೂ-ಜೆ.ಎಫ್.ಇ ಎಲೆಕ್ಟ್ರಿಕಲ್ ಸ್ಟೀಲ್ ಪ್ರೈವೇಟ್ ಲಿಮಿಟೆಡ್ ಇವರು ಯೋಜನಾ ಪ್ರಸ್ತಾವನೆ ಸಲ್ಲಿಸಿದ್ದು, ಇದರ ಸಂಬಂಧ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಸೆ.17 ರಂದು ಬೆಳಿಗ್ಗೆ 11 ಗಂಟೆಗೆ ಕುಡತಿನಿ ಗ್ರಾಮದ ಕೆ.ಐ.ಎ.ಡಿ.ಬಿ ಕೈಗಾರಿಕಾ ಪ್ರದೇಶ ಹಂತ-2ರ ಯೋಜನಾ ಪ್ರದೇಶದಲ್ಲಿ ಪರಿಸರ ಸಾರ್ವಜನಿಕ ಆಲಿಕೆ ಸಭೆ ನಡೆಸಲಾಗುವುದು.
ಇದಕ್ಕೆ ಸಂಬಂಧಿಸಿದಂತೆ ಉದ್ದೇಶಿತ ಯೋಜನೆಯ ಕಾರ್ಯ ನಿರ್ವಾಹಕ ಸಾರಾಂಶ ಪ್ರತಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಸಂಬಂಧಿಸಿದ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಸಾರಾಂಶ ಪ್ರತಿಯನ್ನು ಪ್ರದರ್ಶಿಸಲಾಗಿದೆ.
ಸುತ್ತಮುತ್ತಲಿನ ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಂಡು ಅಭಿಪ್ರಾಯ, ಅಹವಾಲು ಸಲ್ಲಿಸಬಹುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿಯವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್
