ಕೆನರಾ ಬ್ಯಾಂಕ್ ಆಶ್ರಯದಲ್ಲಿ ಮನೆ ಮನೆಗೆ ಕೆಸಿಸಿ ಬೆಳೆ ಸಾಲ ಅಭಿಯಾನ
ಕೋಲಾರ / ೩೧ ಅಕ್ಟೋಬರ್ (ಹಿ.ಸ ) : ಅರ್ಹ ರೈತರು ಸಂಬ0ಧಿತ ಬ್ಯಾಂಕ್ ಗಳಿಂದ ಕೆಸಿಸಿ ಬೆಳೆ ಸಾಲ ಪಡೆಯುವ ಮೂಲಕ ಜೀವನ ಮಟ್ಟ ಸುಧಾರಿಸಿಕೊಳ್ಳಬೇಕು ಎಂದು ರಾಜ್ಯಮಟ್ಟದ ಬ್ಯಾಂಕರ್ ಗಳ ಸಮಿತಿಯ ಸಹಾಯಕ ಮಹಾ ಪ್ರಬಂಧಕ ಪ್ರವೀಣ್ ಕುಮಾರ್ ಹೇಳಿದರು.
ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಮತ್ತು ಕೆನರಾ ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ ಮನೆ ಮನೆಗೆ ಕೆಸಿಸಿ ಬೆಳೆ ಸಾಲ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯು ಅರ್ಹ ರೈತರಿಗೆ ಬ್ಯಾಂಕ್ ಗಳ ಮೂಲಕ ಕೃಷಿ ಸಾಲ ನೀಡಿ, ಕೃಷಿ ಚಟುವಟಿಕೆಗಳನ್ನು ಉತ್ತೇಜಿಸಲು ವಿಶೇಷ ಅಭಿಯಾನ ಕೈಗೊಂಡಿದೆ. ಕೃಷಿ ಸಾಲ ಅಗತ್ಯ ಇರುವ ರೈತರು ತಮ್ಮ ಖಾತೆ ಇರುವ ಬ್ಯಾಂಕ್ ಗಳ ಮೂಲಕ ಕೃಷಿ ಸಾಲ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಬ್ಯಾAಕ್ಗಳಿAದ ಸಾಲ ಮತ್ತು ಸಹಾಯಧನ ಪಡೆದ ರೈತರು ನಿಗದಿತ ಸಮಯಕ್ಕೆ ಸಾಲ ಮರುಪಾವತಿ ಮಾಡಿ, ವಿಶ್ವಾಸ ಉಳಿಸಿಕೊಳ್ಳಬೇಕು. ರೈತರಿಗೆ ಹೆಚ್ಚಿನ ಸಾಲ ನೀಡಬೇಕಾದರೆ, ಈ ಹಿಂದೆ ಸಾಲ ಪಡೆದವರು ಸರಿಯಾದ ಸಮಯಕ್ಕೆ ಸಾಲ ಮರುಪಾವತಿ ಮಾಡಿದಾಗ ಮಾತ್ರ ಸಾಧ್ಯ ಎಂದು ಹೇಳಿದರು.
ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸುಧೀರ್ .ಎಸ್ ಮಾತನಾಡಿ, ಕೆಸಿಸಿ ಯೋಜನೆಯಲ್ಲಿ ರೈತರು ಬೆಳೆ ಸಾಲದ ಜೊತೆಗೆ ತೋಟಗಾರಿಕೆ, ರೇಷ್ಮೆ, ಪುಷ್ಪೋದ್ಯಮ ಹಾಗೂ ಪಶುಸಂಗೋಪನೆಗೂ ಅವಕಾಶವಿದ್ದು, ಅರ್ಹ ರೈತರು ಇದರ ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು.
ಬ್ಯಾಂಕ್ ಗಳಿಂದ ಸಾಲ ಪಡೆದು ಮರುಪಾವತಿ ಮಾಡದಿದ್ದರೆ, ಸಿಬೆಲ್ ಸ್ಕೋರ್ ಕಡಿಮೆಯಾಗುತ್ತದೆ. ಇದರಿಂದ ಭವಿಷ್ಯದಲ್ಲಿ ಮತ್ಯಾವುದೇ ಸಾಲ ಪಡೆಯುವುದಕ್ಕೆ ಸಾಧ್ಯವಾಗುವುದಿಲ್ಲ. ನಮ್ಮ ಮರುಪಾವತಿ ಶಕ್ತಿ ಮತ್ತು ಅಗತ್ಯಕ್ಕೆ ಅನುಸಾರವಾಗಿ ಮಾತ್ರ ಸಾಲ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಆರ್ಥಿಕ ಸಾಕ್ಷರತಾ ಕೇಂದ್ರದ ಸಲಹೆಗಾರ್ತಿ ವಿಶಾಲಾಕ್ಷಿ.ಸಿ ಮಾತನಾಡಿ, ಸಾಮಾಜಿಕ ಭದ್ರತಾ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ದೆಬಿಷಿಷ್ ಮಿಶ್ರಾ, ವ್ಯವಸ್ಥಾಪಕರಾದ ವೆಂಕಟಲಕ್ಷಿö್ಮ, ಗ್ರಾ.ಪಂ ಅಧ್ಯಕ್ಷರಾದ ರೇಣಕಾಂಬ ಮುನಿರಾಜು, ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಶಾಲಿನಿ, ಪ್ರಮೀಳ, ನಾರಾಯಣಸ್ವಾಮಿ, ಮಹೇಂದ್ರ ಎ, ರಾಮಚಂದ್ರಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರ : ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಮತ್ತು ಕೆನರಾ ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ ಮನೆ ಮನೆಗೆ ಕೆಸಿಸಿ ಬೆಳೆ ಸಾಲ ಅಭಿಯಾನಕ್ಕೆ ರಾಜ್ಯಮಟ್ಟದ ಬ್ಯಾಂಕರ್ಗಳ ಸಮಿತಿಯ ಸಹಾಯಕ ಮಹಾ ಪ್ರಬಂಧಕ ಪ್ರವೀಣ್ ಕುಮಾರ್ ಚಾಲನೆ ನೀಡಿದರು.
