ಕೊಪ್ಪಳ, 23 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಅಕ್ಟೋಬರ್ 27 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ತಾಲೂಕ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಬಾಲಚಂದ್ರನ್ ಸ್ಯಾಮುವೆಲ್ ಅವರು ವಹಿಸುವರು.
ಸಭೆಯಲ್ಲಿ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಇತರ ವಿಷಯಗಳ ಕುರಿತು ಚರ್ಚೆ ನಡೆಯಲಿದ್ದು, ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನನಾಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಪ್ರತಿನಿಧಿಗಳನ್ನು ನಿಯೋಜಿಸದೇ ಖುದ್ದಾಗಿ ಸಭೆಗೆ ಹಾಜರಾಗುವಂತೆ ಕೊಪ್ಪಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್
