• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಕೋಗಿಲು : ಮುಸ್ಲಿಂ ಮತಬ್ಯಾಂಕ್ ತುಷ್ಟಿಕರಣದ ಹುನ್ನಾರ-ಹಿಂದೂ ಜಾಗರಣ ವೇದಿಕೆ
Regional

ಕೋಗಿಲು : ಮುಸ್ಲಿಂ ಮತಬ್ಯಾಂಕ್ ತುಷ್ಟಿಕರಣದ ಹುನ್ನಾರ-ಹಿಂದೂ ಜಾಗರಣ ವೇದಿಕೆ

CliQ INDIA
Last updated: January 1, 2026 6:45 pm
CliQ INDIA
Share
2 Min Read
SHARE

ಬೆಂಗಳೂರು, 01 ಜನವರಿ (ಹಿ.ಸ.) :

ಆ್ಯಂಕರ್ : ಬೆಂಗಳೂರು ಜಿಬಿಎ ವ್ಯಾಪ್ತಿಯ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಿಸಿ ವಾಸಿಸುತ್ತಿದ್ದವರನ್ನು ಕಾನೂನಾತ್ಮಕವಾಗಿ ಸರ್ಕಾರ ತೆರವುಗೊಳಿಸಿರುವುದು ಸ್ವಾಗತಾರ್ಹ. ಆದರೆ, ತೆರವು ಕಾರ್ಯಾಚರಣೆಯ ನಂತರ “ಅನುಕಂಪದ ಆಧಾರ”ದಲ್ಲಿ ನಿರಾಶ್ರಿತರಿಗೆ ಸರ್ಕಾರವೇ ಮನೆಗಳನ್ನು ನೀಡುವ ನಿರ್ಧಾರ ಎಷ್ಟರ ಮಟ್ಟಿಗೆ ನ್ಯಾಯಸಮ್ಮತ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ ಎಂದು ಹಿಂದೂ ಜಾಗರಣ ವೇದಿಕೆ ಪ್ರಶ್ನಿಸಿದೆ.

ರಾಜ್ಯದಲ್ಲಿ ಅನೇಕ ವರ್ಷಗಳಿಂದ ಕಾನೂನುಬದ್ಧವಾಗಿ ಮನೆ ಹಕ್ಕುಪತ್ರಗಳು ಹಾಗೂ ನಿವೇಶನಗಳಿಗಾಗಿ ವಿವಿಧ ಸರ್ಕಾರಿ ನಿಗಮಗಳ ಮೂಲಕ ಅರ್ಜಿ ಸಲ್ಲಿಸಿರುವ ಸಾವಿರಾರು ಅರ್ಹ ನಾಗರಿಕರ ಬಗ್ಗೆ ಸರ್ಕಾರದ ನಿಲುವೇನು ಎಂಬುದು ಈ ಸಂದರ್ಭದಲ್ಲಿ ಸ್ಪಷ್ಟವಾಗಬೇಕು. ಸರ್ಕಾರಿ ಭೂಮಿಯನ್ನು ಅತಿಕ್ರಮಿಸಿ ಮನೆಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿರುವವರಲ್ಲಿ ಹೆಚ್ಚಿನವರು ವಲಸಿಗರು; ಅದರಲ್ಲೂ ಅಕ್ರಮ ಬಾಂಗ್ಲಾ ವಲಸಿಗರ ಪ್ರಮಾಣ ಹೆಚ್ಚು ಎನ್ನುವ ಆರೋಪಗಳು ಗಂಭೀರ ಚಿಂತೆಗೆ ಕಾರಣವಾಗಿವೆ. ಇಂತಹ ಅಕ್ರಮ ವಲಸೆಯು ರಾಜ್ಯದ ಭದ್ರತೆಗೆ ಆತಂಕಕಾರಿಯಾಗಿದೆ.

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ, ಅತ್ಯಾಚಾರ, ಕೊಲೆ ಹಾಗೂ ಸುಲಿಗೆಗಳ ಹಿನ್ನೆಲೆಯಲ್ಲಿ, ಅಕ್ರಮವಾಗಿ ಪ್ರವೇಶಿಸಿರುವ ವಲಸಿಗರಿಂದ ಮುಂದಿನ ದಿನಗಳಲ್ಲಿ ಕಾನೂನು-ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಯನ್ನು ನಿರ್ಲಕ್ಷಿಸಲಾಗದು.

ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಅಧಿಕಾರದ ವ್ಯಾಮೋಹದಿಂದ ಅತಿಯಾದ ಮುಸ್ಲಿಂ ತುಷ್ಟಿಕರಣದ ರಾಜಕಾರಣವನ್ನು ಅನುಸರಿಸುತ್ತಿದೆ ಎಂಬ ಆರೋಪಗಳು ಈಗಾಗಲೇ ಸಾರ್ವಜನಿಕ ಚರ್ಚೆಯ ವಿಷಯವಾಗಿವೆ. ಮತಬ್ಯಾಂಕ್ ರಾಜಕಾರಣಕ್ಕಾಗಿ ರಾಷ್ಟ್ರದ ಸುರಕ್ಷತೆ ಮತ್ತು ಏಕತೆಯನ್ನು ಲೆಕ್ಕಿಸದೇ ಇಂತಹ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂಬ ಆಕ್ರೋಶ ಬಹುಸಂಖ್ಯಾತ ಸಮುದಾಯದಲ್ಲಿ ವ್ಯಕ್ತವಾಗಿದೆ.

ಕೋಗಿಲು ಬಡಾವಣೆಯ ಫಕೀರ್ ಲೇಔಟ್ ಮತ್ತು ವಾಸಿಂ ಲೇಔಟ್‌ಗಳನ್ನು ನಿರ್ಮಿಸಿದವರು ಯಾರು ಎಂಬ ಪ್ರಶ್ನೆಗೆ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು. ಸ್ಥಳೀಯ ಮುಸ್ಲಿಂ ಮುಖಂಡರೊಬ್ಬರು ಸರ್ಕಾರಿ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಈ ಬಡಾವಣೆಗಳನ್ನು ನಿರ್ಮಿಸಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇಂತಹ ಬೆಳವಣಿಗೆಗಳು ರಾಜ್ಯದ ಅಖಂಡತೆ, ಏಕತೆ ಮತ್ತು ಭದ್ರತೆಗೆ ಗಂಭೀರ ಆತಂಕವನ್ನುಂಟುಮಾಡುತ್ತವೆ.

ಈಗಾಗಲೇ ಕೋಗಿಲು ಬಡಾವಣೆಯಲ್ಲಿ ವಾಸಿಸುತ್ತಿದ್ದ 180ಕ್ಕೂ ಹೆಚ್ಚು ಮುಸ್ಲಿಂ ಸಮುದಾಯದ ಕುಟುಂಬಗಳಿಗೆ ಅನುಕಂಪದ ಆಧಾರದ ಮೇಲೆ ಮನೆ ನಿರ್ಮಿಸಿ ಕೊಡುತ್ತೇವೆ ಎಂದು ಸರ್ಕಾರ ಭರವಸೆ ನೀಡಿರುವುದು ಸಂಶಯಾಸ್ಪದವಾಗಿದೆ. ಅಕ್ರಮ ವಲಸಿಗರಿಗೆ, ಅದರಲ್ಲೂ ಅಕ್ರಮ ಬಾಂಗ್ಲಾ ವಲಸಿಗರಿಗೆ ಸೂರು ಕಲ್ಪಿಸುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂಬ ಅನುಮಾನವನ್ನು ಇದು ಬಲಪಡಿಸುತ್ತದೆ. ಅಲ್ಪಸಂಖ್ಯಾತ ಇಲಾಖೆಯ ಸಚಿವರು “ಯಾವುದೇ ರೀತಿಯಲ್ಲಿ ಮನೆ ಕಟ್ಟಿಕೊಡುತ್ತೇವೆ” ಎಂಬ ಹೇಳಿಕೆಗಳು ಸರ್ಕಾರದ ತುಷ್ಟಿಕರಣದ ಮನೋಭಾವವನ್ನು ತೋರಿಸುತ್ತವೆ.

ಆದ್ದರಿಂದ, ಸರ್ಕಾರವು ಈ ನಿರ್ಧಾರದಿಂದ ತಕ್ಷಣ ಹಿಂದೆ ಸರಿಯಬೇಕು ಎಂದು ಹಿಂದು ಜಾಗರಣ ವೇದಿಕೆ ಆಗ್ರಹಿಸುತ್ತದೆ. ಇಲ್ಲವಾದಲ್ಲಿ, ಮುಂದಿನ ದಿನಗಳಲ್ಲಿ ಜನಾಂದೋಲನ ರೂಪಿಸಿ ಸರ್ಕಾರದ ಕ್ರಮಗಳ ವಿರುದ್ಧ ಹೋರಾಟವನ್ನು ಸಂಘಟನೆಯು ಕೈಗೊಳ್ಳಲಿದೆ.

ಇದಲ್ಲದೆ, ಬೆಂಗಳೂರಿನಲ್ಲಿ ಹಕ್ಕುಪತ್ರಗಳಿಗಾಗಿ ಅರ್ಜಿ ಸಲ್ಲಿಸಿರುವ ಸಾವಿರಾರು ನಿರಾಶ್ರಿತ ಅರ್ಹ ಹಿಂದೂ ಕುಟುಂಬಗಳನ್ನು ಒಗ್ಗೂಡಿಸಿ ಪ್ರತಿಭಟನೆಗಳನ್ನು ನಡೆಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಈ ಮೂಲಕ ನೀಡಲಾಗುತ್ತಿದೆ. ಸರ್ಕಾರವು ತನ್ನ ನಿರ್ಧಾರವನ್ನು ಮರುಪರಿಶೀಲಿಸಿ, ಕಾನೂನಿನ ಅಡಿಯಲ್ಲಿ ನಿಜವಾಗಿಯೂ ಅರ್ಹರಾದವರಿಗೆ ಮಾತ್ರ ಸೂರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ನಾವು ಆಗ್ರಹಿಸುತ್ತೇವೆ ಎಂದು ಹಿಂದೂ ಜಾಗರಣ ವೇದಿಕೆಯ ಬೆಂಗಳೂರು ಮಹಾನಗರ ಸಂಚಾಲಕ ರಾಜಣ್ಣ ಹೊನ್ನೇನಹಳ್ಳಿ ಹಾಗೂ ಪ್ರಾಂತ ಸಂಚಾಲಕ ದೋ. ಕೇಶವಮೂರ್ತಿ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಲಾರಿ-ಕಾರ್ ಮಧ್ಯ ಅಪಘಾತ : ಓರ್ವ ಸಾವು
ಕುಮಾರಸ್ವಾಮಿ ಹಣ ಪಡೆದು ವರ್ಗಾವಣೆ ಮಾಡುತ್ತಿದ್ದರು : ಸಿಎಂ ಸಿದ್ದರಾಮಯ್ಯ
ನಮ್ಮೆಲ್ಲರ ಭವಿಷ್ಯಕ್ಕೆ ಜೈವಿಕ ಇಂಧನ ಅತ್ಯಗತ್ಯ : ಎಸ್.ಇ.ಸುಧೀಂದ್ರ
ಕಡಿಮೆ ಮತದಾನದ ಮತಗಟ್ಟೆಗಳಿಗೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳ ಭೇಟಿ
ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ 79 ನೇ ಸ್ವಾತಂತ್ರೋತ್ಸವ ದಿನಾಚರಣೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ರಾಯ್‌ಪುರ ಸಾಮಾಜಿಕ ಸಾಮರಸ್ಯ ಸಭೆಯಲ್ಲಿ ಡಾ. ಮೋಹನ್ ಭಾಗವತ್
Next Article ಸಂಸ್ಕೃತ ಗಾದೆ ಹಂಚಿಕೊಂಡು ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಿ ಮೋದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?