• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಗದಗ ಜಿಲ್ಲೆ ದೇಶದಲ್ಲಿ 4ನೇ ಸ್ಥಾನ, 25 ಲಕ್ಷ ರೂಪಾಯಿ ಬಹುಮಾನ
Regional

ಗದಗ ಜಿಲ್ಲೆ ದೇಶದಲ್ಲಿ 4ನೇ ಸ್ಥಾನ, 25 ಲಕ್ಷ ರೂಪಾಯಿ ಬಹುಮಾನ

CliQ INDIA
Last updated: September 30, 2025 11:20 am
CliQ INDIA
Share
4 Min Read
SHARE

ಗದಗ, 29 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಲಶಕ್ತಿ ಅಭಿಯಾನದ ಅಂಗವಾಗಿ ಜಲಸಂಚಾಯಿ ಜನಭಾಗಿದಾರಿ 1.0 ಕಾರ್ಯಕ್ರಮದಡಿ ಗದಗ ಜಿಲ್ಲೆಯು ಜಲ ಸಂರಕ್ಷಣೆ ಅಡಿಯಲ್ಲಿ ಐತಿಹಾಸಿಕ ಸಾಧನೆ ಮಾಡುವ ಮೂಲಕ ಕರ್ನಾಟಕದಲ್ಲಿ ಪ್ರಥಮ ಸ್ಥಾನ ಗಳಿಸಿ ಪ್ರಶಂಸೆಗೆ ಪಾತ್ರವಾಗಿದೆ. ದೇಶದ 780 ಜಿಲ್ಲೆಗಳಲ್ಲಿ ಜೋನ್ 3 ಕೆಟಗರಿ 3 ರಲ್ಲಿ 4ನೇ ಸ್ಥಾನ ಪಡೆದು, 25 ಲಕ್ಷ ರೂಪಾಯಿಗಳ ನಗದು ಬಹುಮಾನಕ್ಕೆ ಭಾಜನವಾಗಿದೆ. ಈ ಗೌರವವು ಗದಗ ಜಿಲ್ಲೆಯ ಜನಸಾಮಾನ್ಯ, ಸರ್ಕಾರಿ ಸಂಸ್ಥೆಗಳು ಮತ್ತು ಎನ್.ಜಿ.ಓ.ಗಳ ಒಗ್ಗಟ್ಟಿನ ಶಕ್ತಿಯ ಸಾಕ್ಷಿಯಾಗಿದೆ.

ಜಲಸಂಚಾಯಿ ಅಂದ್ರೆ ಎನು? ಅದರ ಗುರಿಗಳು ಯಾವವು, ನೀರಿಗಾಗಿ ಒಂದಾಗಿ ‘ಪ್ರತಿ ಹನಿ ನೀರನ್ನು ಸಂರಕ್ಷಿಸಿ’ ಎಂಬ ಧ್ಯೇಯದೊಂದಿಗೆ ಜಲಸಂಚಾಯಿ ಜನಭಾಗಿದಾರಿ 1.0 ಅಭಿಯಾನವು ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು, ಮಳೆ ನೀರನ್ನು ಸಂಗ್ರಹಿಸುವುದು, ಜಲ ಸಂರಕ್ಷಣೆಯ ಸಂಸ್ಕೃತಿಯನ್ನು ಬೆಳೆಸುವುದು, ಹವಾಮಾನ ಸ್ಥಿತಿಗತಿಯನ್ನು ಉತ್ತೇಜಿಸುವುದು ಮತ್ತು ನೀರಿನ ಗುಣಮಟ್ಟ ವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ಸ್ಥಳೀಯ ಸಮುದಾಯ, ಸರ್ಕಾರಿ ಸಂಸ್ಥೆಗಳು ಮತ್ತು ಎನ್.ಜಿ.ಓ.ಗಳ ಸಹಯೋಗದಿಂದ ಈ ಕಾರ್ಯಕ್ರಮವು ನೀರಿನ ಕೊರತೆಯ ಸವಾಲಿಗೆ ಸಮರ್ಥ ಪರಿಹಾರವನ್ನು ಹುಡುಕುವುದಾಗಿದೆ

ಗದಗ ಜಿಲ್ಲೆಯ ಜ‌ಲಕ್ರಾಂತಿ ಕೊಡುಗೆ: 11,971 ಕಾಮಗಾರಿಗಳ ಸಾಧನೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಸೇರಿದಂತೆ ಇತರ ಯೋಜನೆಗಳಡಿ, ಗದಗ ಜಿಲ್ಲೆಯು 01-04-2024 ರಿಂದ 31-03-2025 ರವರೆಗೆ 11,971 ಜಲಸಂರಕ್ಷಣೆ ಕಾಮಗಾರಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಜಲಸಂಚಾಯಿ ಪೋರ್ಟಲ್ ನಲ್ಲಿ ದಾಖಲಿಸಿದ್ದು ಇವುಗಳಲ್ಲಿ 11,329 ವೈಯಕ್ತಿಕ ಮತ್ತು ಸಮುದಾಯ ಬದು ನಿರ್ಮಾಣಗಳು, 75 ಬೋರ್‌ವೆಲ್ ರೀಚಾರ್ಜ್‌ಗಳು, 60 ಸೋಕ್‌ಪಿಟ್‌ಗಳು, 465 ಮಳೆನೀರು ಕೊಯ್ಲು ಕಾಮಗಾರಿಗಳು, 10 ಚೆಕ್ ಡ್ಯಾಂಗಳು ಮತ್ತು 32 ಗಲ್ಲಿ ಪ್ಲಗ್‌ಗಳು ಸೇರಿವೆ. ಈ ಕಾಮಗಾರಿಗಳು ಗದಗ ಜಿಲ್ಲೆಯ ಜಲ ಸಂರಕ್ಷಣೆಯ ಚಿತ್ರಣವನ್ನೇ ಬದಲಾಯಿಸಿವೆ.

ಕೇಂದ್ರ ತಂಡದಿಂದ ಮನ್ನಣೆ ಪಡೆದ ಗದಗ ಜಿಲ್ಲಾ ಪಂಚಾಯತ್

ಕೇಂದ್ರ ನೋಡಲ್ ಆಫೀಸರ್ ತಂಡವು 16-06-2025 ರಿಂದ 21-06-2025ರವರೆಗೆ ಗದಗ ಜಿಲ್ಲೆಯಲ್ಲಿ ಶೇ. 1 % ಸ್ಥಳ ಪರಿಶೀಲನೆ ನಡೆಸಿ, ಕಾಮಗಾರಿಗಳ ಗುಣಮಟ್ಟ ಕ್ಕೆ ಮೆಚ್ಚುಗೆ ವ್ಯಕ್ತಪಡಿಸಿತು. ಶೇ. 99 % ಡೆಸ್ಕ್‌ಟಾಪ್‌ ಮೌಲ್ಯ ಮಾಪನದಲ್ಲಿಯೂ ಈ ಕಾಮಗಾರಿಗಳು ಉನ್ನತ ಮಾನದಂಡ ಗಳನ್ನು ಪೂರೈಸಿವೆ ಎಂದು ದಾಖಲಾಗಿದೆ. ಈ ಸಾಧನೆಯು ಗದಗ ಜಿಲ್ಲೆಯನ್ನು ಕರ್ನಾಟಕದಲ್ಲಿ ಮೊದಲ ಸ್ಥಾನಕ್ಕೆ ಒಯ್ಯುವುದು ಮಾತ್ರವಲ್ಲದೆ, ದೇಶದಲ್ಲಿಜೋನ್ 3 ಕೆಟಗರಿ 3, 4ನೇ ಸ್ಥಾನವನ್ನು ಗಳಿಸುವಂತೆ ಮಾಡಿದೆ.

ಈ ಅಭಿಯಾನದ ಯಶಸ್ಸಿಗೆ ಜಿಲ್ಲಾಧಿಕಾರಿಗಳು,ಉಪವಿಭಾಗ ಅಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಮನರೇಗಾ ಯೋಜನೆಯ ಸಹಾಯಕ ಕಾರ್ಯಕ್ರಮ ಸಮನ್ವಯ ಅಧಿಕಾರಿ ಕಿರಣಕುಮಾರ್ ಮತ್ತು ಅವರ ತಂಡ,ಜಿಲ್ಲೆಯ ಡಿಇಓ ರವರ ಅವಿರತ ಶ್ರಮವೇ ಕಾರಣ. ಗದಗ ಜಿಲ್ಲೆಯ ಈ ಜಲಕ್ರಾಂತಿಯು ರಾಜ್ಯಕ್ಕೆ ಮಾದರಿಯಾಗಿದ್ದು, ಜಲಸಂರಕ್ಷಣೆಯಲ್ಲಿ ಒಗ್ಗಟ್ಟಿನ ಶಕ್ತಿಯನ್ನು ಸಾರಿದೆ.

25 ಲಕ್ಷ ರೂ. ಬಹುಮಾನದೊಂದಿಗೆ ಹೊಸ ಉತ್ಸಾಹ* ಕೇಂದ್ರ ಸರ್ಕಾರದಿಂದ ಘೋಷಿತವಾದ 25 ಲಕ್ಷ ರೂಪಾಯಿಗಳ ಬಹುಮಾನವು ಗದಗ ಜಿಲ್ಲೆಯ ಈ ಜಲಯಾತ್ರೆಗೆ ಹೊಸ ಉತ್ಸಾಹ ತುಂಬಿದೆ. ಈ ಸಾಧನೆಯು ಗದಗ ಜಿಲ್ಲೆಯನ್ನು ಜಲ ಸಂರಕ್ಷಣೆಯಲ್ಲಿ ರಾಷ್ಟ್ರಮಟ್ಟದ ಗಮನಕ್ಕೆ ತಂದಿದೆ, ಜೊತೆಗೆ ಭವಿಷ್ಯದಲ್ಲಿ ಇನ್ನಷ್ಟು ಕಾಮಗಾರಿಗಳಿಗೆ ಪ್ರೇರಣೆಯಾಗಿದೆ. ಇಂತಹ ಇನ್ನಷ್ಟು ಪ್ರಶಸ್ತಿ ಗದಗ ಜಿಲ್ಲೆಗೆ ಲಭಿಸಲಿ ಅನ್ನುವುದು ಎಲ್ಲರ ಆಶಯ.

ಜಲಸಂಚಾಯಿ ಜನಭಾಗಿದಾರಿ ಅಭಿಯಾನದಲ್ಲಿ ಕರ್ನಾಟಕದಲ್ಲೇ ಗದಗ ಜಿಲ್ಲೆಗೆ ಪ್ರಥಮ ಸ್ಥಾನ ಬಂದಿರುವುದು ಸಂತಸ ತರಿಸಿದೆ. ಅಂತರ್ಜಲ ಮಟ್ಟ ಹೆಚ್ಚಳ ಮತ್ತು ಪರಿಸರ ಸಂರಕ್ಷಣೆ ಕುರಿತು ಜಿಲ್ಲೆಯ ಅಧಿಕಾರಿಗಳು ಶ್ರಮವಹಿಸಿ ಹಲವು ಕಾಮಗಾರಿಗಳನ್ನು ಅನುಷ್ಟಾನ ಮಾಡಿರುವುದು ಪ್ರಶಂಸೆನೀಯ. ಪ್ರಥಮ ಸ್ಥಾನ ಬಂದಿರುವುದಕ್ಕೆ ಜಿಲ್ಲೆಗೆ ನಗದು ರೂಪದಲ್ಲಿ ೨೫ ಲಕ್ಷ ಅನುದಾನ ನೀಡುತ್ತಿದ್ದಾರೆ. ಬರುವ ಅನುದಾನವನ್ನು ಅಭಿಯಾನದ ಉದ್ದೇಶ ಈಡೇರಿಕೆಗೆ ಬಳಸಿಕೊಳ್ಳಲು ಶ್ರಮಿಸಲಾಗುವುದು.

ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಬದುನಿರ್ಮಾಣ ಕಾಮಗಾರಿ, ಚೆಕ್ ಡ್ಯಾಂ ನಿರ್ಮಾಣ, ಬೋರವೆಲ್ ರೀಚಾರ್ಜ್ ಕಾಮಗಾರಿ ಸೇರಿದಂತೆ ಹಲವು ಪರಿಸರ ಸ್ನೇಹಿ ಕಾಮಗಾರಿಗಳನ್ನು ಅನುಷ್ಟಾನ ಮಾಡಲಾಗಿದೆ. ಅನುಷ್ಠಾನ ಮಾಡಲಾದ ಎಲ್ಲಾ ಕಾಮಗಾರಿಗಳನ್ನು ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಪರಿಶೀಲನೆ ಸಂದರ್ಭದಲ್ಲಿ ಕೇಂದ್ರ ತಂಡ ಜಿಲ್ಲೆಯ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಹೀಗಾಗಿ ಗದಗ ಜಿಲ್ಲೆಗೆ ಈ ಅಭಿಯಾನದಡಿ ಪ್ರಥಮ ಸ್ಥಾನ ದೊರಕಿರುವುದು ನಮಗೆ ಮತ್ತಷ್ಟು ಕಾಮಗಾರಿಗಳನ್ನು ಅನುಷ್ಟಾನಿಸಲು ಪ್ರೋತ್ಸಾಹಕವಾಗಿದೆ.

ಜಿಲ್ಲೆಯ ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ 11971 ಕಾಮಗಾರಿಗಳ ಮಾಹಿತಿಯನ್ನು ಜಲಸಂಚಾಯಿ ಜನಭಾಗಿದಾರಿ ೧.೦ ಪೋರ್ಟಲ್ ನಲ್ಲಿ ಅಪಲೋಡ ಮಾಡಲಾಗಿದೆ. ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಅತೀ ಹೆಚ್ಚು ಕಾಮಗಾರಿಗಳನ್ನು ಜಿಲ್ಲೆಯಲ್ಲಿ ಅನುಷ್ಟಾನಿಸಿರುವುದರಿಂದಲೇ ಈ ಪ್ರಶಸ್ತಿ ಬಂದಿದೆ. ಇದಕ್ಕೆ ಪೂರಕವಾಗಿ ಇನ್ನಷ್ಟು ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಮನರೇಗಾ ಯೋಜನೆಯಡಿಯಲ್ಲಿ ಕ್ರಿಯಾಯೋಜನೆ ನಿಯಮನುಸಾರ ತಯಾರಿಸಿ ಮತ್ತು ಅನುಮೋದನೆ ತೆಗೆದುಕೊಂಡು ಇನ್ನು ಹೆಚ್ಚಿನ ಕ್ರಿಯಾತ್ಮಕ ಕಾಮಗಾರಿಗಳನ್ನು ಅನುಷ್ಠಾನ ಮಾಡಲು ಮೇಲಾಧಿಕಾರಿಗಳ ಸೂಚನೆಯಂತೆ ಕ್ರಮವಹಿಸಲಾಗುವುದು.ಮತ್ತು ಸದರಿ ಅಭಿಯಾನಧಡಿ ಶ್ರಮಿಸಿದ ಮನರೇಗಾ ತಂಡಕ್ಕೆ ಮತ್ತು ಜಿಲ್ಲೆಯ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP

You Might Also Like

ಹೊಸಪೇಟೆ ; ಸೀತಾರಾಮ ತಾಂಡ ಗ್ರಾಮ ಪಂಚಾಯಿತಿ ಚುನಾವಣೆ ವೇಳಾಪಟ್ಟಿ ಪ್ರಕಟ
ರಾಜ್ಯದ ಹಿತದೃಷ್ಟಿಯಿಂದ ಕೇಂದ್ರ ವಿಶೇಷ ಅನುದಾನ ಕೊಡಬೇಕು -ಡಾ.ಜಿ.ಪರಮೇಶ್ವರ್
ಕರಾವಳಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ
ಸರ್ಕಾರಿ ಬಾಲಮಂದಿರ, ದತ್ತು ಸ್ವೀಕಾರ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳ ದಿಢೀರ್ ಭೇಟಿ
ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಬಿಜೆಪಿ ಹಿರಿಯ ನಾಯಕ ವಿಜಯ್ ಕುಮಾರ್ ಮಲ್ಹೋತ್ರಾ ನಿಧನ
Next Article ಡ್ರೀಮ್ ಡ್ಯಾಶ್ 2025 ಫೈನಲ್ : ಹೆರಿಟೇಜ್ ಶಾಲೆಗೆ 10 ಪದಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?