• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಗಾಂಧೀಜಿಯಿಂದ ರಾಮನನ್ನು ಬೇರ್ಪಡಿಸುವುದೇ ಗಾಂಧೀಜಿಗೆ ಮಾಡುವ ಅಪಚಾರ : ಬಸವರಾಜ ಬೊಮ್ಮಾಯಿ
Regional

ಗಾಂಧೀಜಿಯಿಂದ ರಾಮನನ್ನು ಬೇರ್ಪಡಿಸುವುದೇ ಗಾಂಧೀಜಿಗೆ ಮಾಡುವ ಅಪಚಾರ : ಬಸವರಾಜ ಬೊಮ್ಮಾಯಿ

CliQ INDIA
Last updated: December 22, 2025 9:05 am
CliQ INDIA
Share
3 Min Read
SHARE

ಗದಗ, 21 ಡಿಸೆಂಬರ್ (ಹಿ.ಸ.) :

ಆ್ಯಂಕರ್ :- ರಾಜ್ಯ ಸರ್ಕಾರ ಎಲ್ಲ ರಂಗದಲ್ಲಿಯೂ ವಿಫಲವಾಗಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಅದರ ವಿರುದ್ಧ ಮಾತನಾಡದಂತೆ ಪ್ರತಿ ಪಕ್ಷ, ರೈತರು, ಜನ ಸಾಮಾನ್ಯರನ್ನು ದಮನ ಮಾಡಲು ವ್ಯಕ್ತಿಯ ಸ್ವಾತಂತ್ರ್ಯ ಹರಣ ಮಾಡಲು ಸಂವಿಧಾನ ವಿರುದ್ಧ ದ್ವೇಷ ಭಾಷಣ ನಿಯಂತ್ರಣ ಕಾನೂನು ತಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಯಾವುದೇ ರೀತಿಯ ಅಭಿವೃದ್ಧಿ ಮಾಡಿಲ್ಲ. ಯಾವ ಇಲಾಖೆಯಲ್ಲಿಯೂ ಕೆಲಸ ಆಗುತ್ತಿಲ್ಲ. ಭ್ರಷ್ಟಾಚಾರ ಹೆಚ್ಚಾಗಿದೆ. ರಾಜ್ಯವನ್ನು ದಿವಾಳಿ ಮಾಡಿದ್ದಾರೆ. ಜನರು ಇದನ್ನು ವಿರೋಧ ಮಾಡಬಾರದು ಎಂದು ದ್ವೇಷ ಭಾಷಣದ ವಿರುದ್ಧ ಕಾನೂನು ಮಾಡಿದ್ದಾರೆ. ಕಾಂಗ್ರೆಸ್‌ ನವರೇ ಹೆಚ್ಚು ದ್ವೇಷ ಭಾಷಣ ಮಾಡಿದ್ದಾರೆ. ಈಗಾಗಲೇ ದ್ವೇಷ ಭಾಷಣ ಮಾಡುವುದನ್ನು ನಿಯಂತ್ರಿಸಲು ಬಿಎನ್‌ಎಸ್ ಕಾನೂನಿದೆ. ಇವರು ವಿರೋಧ ಪಕ್ಷ, ರೈತರನ್ನು, ಜನ ಸಾಮಾನ್ಯರನ್ನು ದಮನ ಮಾಡಲು ವ್ಯಕ್ತಿಯ ಸ್ವಾತಂತ್ರ್ಯ ಹರಣ ಮಾಡಲು ಸಂವಿಧಾನದ ವಿರುದ್ಧ ಈ ಕಾನೂನು ತಂದಿದ್ದಾರೆ ಎಂದು ಹೇಳಿದರು.

ಜಿ. ರಾಮ್ ಜಿ ವಿಧೇಯಕವನ್ನು ಕಾಂಗ್ರೆಸ್ ವಿರೋಧಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಿ ರಾಮ್ ಜಿ ವಿಧೇಯಕದ ಬಗ್ಗೆ ಸಂಸತ್ತಿನಲ್ಲಿ ಸುಮಾರು ಹದಿನೈದು ಗಂಟೆಗಳಿಗಿಂತ ಸುದೀರ್ಘವಾಗಿ ಚರ್ಚೆಯಾಗಿದೆ. ಪ್ರಮುಖವಾಗಿ ಹದಿನೈದು ಇಪ್ಪತ್ತು ವರ್ಷದಿಂದ ಇದ್ದ ಕಾನೂನು ಇವತ್ತಿನ ಗ್ರಾಮೀಣ ಪರಿಸ್ಥಿತಿ ಬಹಳ ಬದಲಾಗಿದೆ. ಅದರ ಅನುಗುಣವಾಗಿ ಬದಲಾವಣೆ ಮಾಡಾಲಾಗಿದೆ. ಭ್ರಷ್ಟಾಚಾರ ಹೆಚ್ಚಾಗಿತ್ತು. ಯೋಜನೆ ದುರುಪಯೋಗ ಆಗುತ್ತಿರುವ ಆರೋಪ ಇತ್ತು. ತಾಂತ್ರಿಕವಾಗಿ ಅದನ್ನು ನಿಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ. ಸೋರಿಕೆ ತಡೆಯಲಾಗಿದೆ. ಆಸ್ತಿ ಮಾಡಲು ಹೆಚ್ಚಿನ ಆದ್ಯತೆ ನೀಡಲಾಗಿದೆ. ದೇಶ ಕಟ್ಟುವ ಪ್ರಕ್ರಿಯೆಯಲ್ಲಿ ಈ ಯೋಜನೆ ಬಳಕೆ ಆಗಬೇಕೆಂದು ಬದಲಾವಣೆ ತಂದಿದ್ದಾರೆ. ಪ್ರತಿ ವರ್ಷ ಒಂದು ಲಕ್ಷ ಹನ್ನೊಂದು ಸಾವಿರ ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಅದು ಒಳ್ಳೆಯ ಉದ್ದೇಶಕ್ಕೆ ಆಗಬೇಕು. ಬಹಳಷ್ಟು ರಾಜ್ಯಗಳಲ್ಲಿ ದುರುಪಯೋಗ ಆಗುತ್ತಿತ್ತು. ನೋಂದಣಿ ಅಥವಾ ಉದ್ಯೋಗದ ದಿನಗಳನ್ನು ಕಡಿಮೆ ಮಾಡಿಲ್ಲ. 25 ದಿನ ಹೆಚ್ಚಿಗೆ ಮಾಡಲಾಗಿದೆ. ಆದ್ದರಿಂದ ಇದೊಂದು ಪ್ರಗತಿಪರವಾಗಿದೆ. ಪ್ರತಿ ಪಕ್ಷಗಳು ಇದನ್ನು ವಿರೋಧ ಮಾಡಲು ವಿರೋಧಿಸುತ್ತಿವೆ ಎಂದು ಹೇಳಿದರು.

ಮಹಾತ್ಮಾ ಗಾಂಧೀಜಿಯವರ ವಿಚಾರಧಾರೆ ಹತ್ತಿಕ್ಕಲು ಈ ವಿಧೇಯಕ ತರಲಾಗಿದೆ ಎಂಬ ಕಾಂಗ್ರೆಸ್ ನವರ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಮನ ಹೆಸರು ತೆಗೆದುಕೊಂಡಾಗ ಅದರಲ್ಲಿ ಗಾಂಧೀಜಿ ಇದ್ದಾರೆ. ಗಾಂಧಿ ರಾಮರಾಜ್ಯ, ಗಾಮ ರಾಜ್ಯದ ಬಗ್ಗೆ ಮಾತನಾಡಿದ್ದಾರೆ. ರಾಮನನ್ನು ಗಾಂಧೀಜಿಯಿಂದ ಬೇರ್ಪಡಿಸುವುದೇ ಗಾಂಧಿಜಿಗೆ ಮಾಡುವ ದೊಡ್ಡ ಅಪಚಾರ ಎಂದು ಹೇಳಿದರು.

ರಾಜ್ಯ ಸರ್ಕಾರ ಮೆಕ್ಕೆಜೋಳ ಖರೀದಿ ಮಾಡದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಇದನ್ನು ಮೊದಲೇ ಹೇಳಿದ್ದೆ. ಯಾವುದೇ ಏಜೆನ್ಸಿ ನಿಗದಿ ಮಾಡಿರಲಿಲ್ಲ. ಅವರೇ ಹತ್ತು ಲಕ್ಷ ಮೆಟ್ರಿಕ್ ಟನ್ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು. ಎಷ್ಟು ಮೆಟ್ರಿಕ್ ಟನ್ ಖರೀದಿ ಮಾಡಿದ್ದಾರೆ ಎಂದು ಸರ್ಕಾರ ಬಹಿರಂಗ ಪಡಿಸಲಿ. ಎಲ್ಲೆಲ್ಲೂ ಕೂಡ ಖರೀದಿ ಆಗುತ್ತಿಲ್ಲ. ಎಂಟತ್ತು ಕ್ವಿಂಟಲ್ ಖರೀದಿಸಿ ನಿಲ್ಲಿಸುತ್ತಾರೆ. ಮೆಕ್ಕೆಜೋಳ ಬೆಳೆಯುವ ರೈತರಿಗೆ ಸರ್ಕಾರ ಮೋಸ ಮಾಡಿದೆ ಎಂದು ದೂರಿದರು.

ಯಲವಿಗಿ ಗದಗ ರೈಲ್ವೆ ಯೋಜನೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಹೇಳಿದ್ದೇನೆ. ಡಿಪಿಆ‌ರ್ ಸಿದ್ಧವಾಗಿದೆ. ರೈಲ್ವೆ ಬೋರ್ಡ್‌ಗೆ ಒಪ್ಪಿಗೆಗೆ ಹೋಗುತ್ತದೆ. ರಾಜ್ಯ ಸರ್ಕಾರ ಅದನ್ನು ಕಳಿಸಬೇಕು. ಅಲ್ಲಿಂದ ಒಪ್ಪಿಗೆ ಬಂದ ನಂತರ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗುತ್ತದೆ. ಶೇ 80 ರಷ್ಟು ಭೂಸ್ವಾಧೀನ ಪ್ರಕ್ರಿಯೆ ಮುಗಿದ ಮೇಲೆ ಕಾರ್ಯಾರಂಭ ಆಗಲಿದೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / lalita MP

You Might Also Like

ಶಿಕ್ಷಣ ಜೊತೆ ಕೌಶಲ್ಯ ಇದ್ದಲ್ಲಿ ಸಾಧನೆ ಸಾಧ್ಯ : ಪಟ್ಟಣಶೆಟ್ಟಿ
ನಾಳೆ ವಿಜಯಪುರ ನಗರದಲ್ಲಿ ಮದ್ಯ ಮಾರಾಟ ನಿಷೇಧ
ಡಿಕೆ ಶಿವಕುಮಾರ್ ಸವಾಲು ಸ್ವೀಕರಿಸಿದ ಹೆಚ್ಡಿ ಕುಮಾರಸ್ವಾಮಿ
ಕರ್ನಾಟಕ ಆಡಳಿತಾ ಸುಧಾರಣಾ ಆಯೋಗದ ವರದಿ ಸಲ್ಲಿಕೆ
ಬೃಹತ್ ಆರೋಗ್ಯ ಶಿಬಿರ ; ಅಂತಿಮ ಹಂತದ ಸಿದ್ಧತಾ ಸಭೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಯುವಜನತೆ ರಾಷ್ಟ್ರೀಯ ಪ್ರಜ್ಞೆ ಬೆಳೆಸಿಕೊಳ್ಳುವುದು ಅವಶ್ಯಕ : ಮೋಹನ್ ಭಾಗವತ್
Next Article ಇವಿ ತಂತ್ರಜ್ಞಾನ ಭಾರತದ ಅಭಿವೃದ್ಧಿಗೆ ವೇಗ : ಜಿತೇಂದ್ರ ಸಿಂಗ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?