ಬೆಂಗಳೂರು, 7 ಜನವರಿ(ಹಿ.ಸ):
ಆ್ಯಂಕರ್ :
ನಗರದ ಕುಮಾರಕೃಪಾ ರಸ್ತೆಯಲ್ಲಿ ಇಂದು (ಜ.07) 21ನೇ ಚಿತ್ರಸಂತೆ ನಡೆಯಲಿದೆ. ಈ ಚಿತ್ರಸಂತೆಯನ್ನು ಚಿತ್ರಕಲಾ ಪರಿಷತ್ ಆಯೋಜಿಸಿದೆ. ಚಿತ್ರಸಂತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಇನ್ನು ಕಲಾಪ್ರದರ್ಶನಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ. ವೀಕ್ಷಿಸಲು ಸಾವಿರಾರು ಜನರು ಆಗಮಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬಿಎಂಟಿಸಿಯು ಮೆಟ್ರೋ ಫೀಡರ್ ಬಸ್ ವ್ಯವಸ್ಥೆ ಮಾಡಿದೆ. ಈ ಬಸ್ಗಳು ಬೆಳಗ್ಗೆ 8 ರಿಂದ ರಾತ್ರಿ 8ರ ವರೆಗೆ ಸಂಚರಿಸಲಿವೆ. ಈ ಮೆಟ್ರೋ ಫೀಡರ್ ಬಸ್ನಲ್ಲಿ ಪ್ರಯಾಣಕ್ಕೆ 15 ರೂ. ನಿಗದಿ ಮಾಡಲಾಗಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಆನಂದರಾವ್ ಸರ್ಕಲ್, ಶಿವಾನಂದ ಸ್ಟೋರ್ಸ್ ಮಾರ್ಗವಾಗಿ ವಿಧಾನಸೌಧ ಮೆಟ್ರೊ ನಿಲ್ದಾಣಕ್ಕೆ ಪ್ರತಿ 10 ನಿಮಿಷಕ್ಕೊಂದರಂತೆ 4 ಬಸ್ ಹಾಗೂ ಮಂತ್ರಿ ಮಾಲ್ ಮೆಟ್ರೊ ನಿಲ್ದಾಣದಿಂದ ಸೆಂಟ್ರಲ್ ಟಾಕೀಸ್, ಲಿಂಕ್ ರಸ್ತೆ, ಶಿವಾನಂದ ಸ್ಟೋರ್ಸ್ ಮುಖೇನ ವಿಧಾನಸೌಧಕ್ಕೆ 4 ಬಸ್ಗಳು ಸಂಚರಿಸಲಿವೆ.
ಹಿಂದೂಸ್ತಾನ್ ಸಮಾಚಾರ್
