
ಬೆಂಗಳೂರು, 30 ಡಿಸೆಂಬರ್(ಹಿ.ಸ):
ಆ್ಯಂಕರ್ :
ಜ.3 ರಿಂದ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ . ‘ಸುಮಾರು 10 ದಿನ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಂಬಂಧಪಟ್ಟ ಶಾಸಕರು, ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಜನಸ್ಪಂದನಾ ಕಾರ್ಯಕ್ರಮದಲ್ಲಿ ಜನರು ತಮ್ಮ ಸಮಸ್ಯೆ ಹೇಳಬಹುದು, ಯಾರೂ ಕೂಡ ನಮ್ಮ ಮನೆ ಬಾಗಿಲಿಗೆ ಬಂದು ನಿಲ್ಲಬಾರದು. ಮೊದಲು ಮಹದೇವಪುರದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯುತ್ತದೆ. ಬಳಿಕ ಕೆ.ಆರ್.ಪುರಂ, ಶಿವಾಜಿನಗರ, ಹೆಬ್ಬಾಳ, ಪುಲಕೇಶಿನಗರ, ಯಲಹಂಕ, ದಾಸರಹಳ್ಳಿ, ಬ್ಯಾಟರಾಯನಪುರ, ಗಾಂಧಿನಗರ, ಚಾಮರಾಜಪೇಟೆಯಲ್ಲಿ ನಡೆಯುತ್ತೆ. ಇನ್ನು ಈ ಜನಸ್ಪಂದನಾ ಕಾರ್ಯಕ್ರಮಗಳು ಬಹುತೇಕ ಮೈದಾನಗಳಲ್ಲಿ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದರು..
ಹಿಂದೂಸ್ತಾನ್ ಸಮಾಚಾರ್
