
ಬೆಂಗಳೂರು, 26 ಡಿಸೆಂಬರ್(ಹಿ.ಸ):
ಆ್ಯಂಕರ್ :
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್ 31 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಚಳಿ ಮುಂದುವರೆದಿದೆ, ಒಣಹವೆ ಇದೆ.
ವಿಜಯಪುರದಲ್ಲಿ 10.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಮುಸುಕುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್
