• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ
Regional

ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ

CliQ INDIA
Last updated: January 9, 2024 3:21 am
CliQ INDIA
Share
3 Min Read
SHARE
 ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ 

ಕೊಪ್ಪಳ, 8 ಜನವರಿ(ಹಿ.ಸ):

ಆ್ಯಂಕರ್ : ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಅಗತ್ಯ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೌರ್ಜನ್ಯ, ಗಲಭೆ ಪ್ರಕರಣಗಳಲ್ಲಿ ತನಿಖೆಯಲ್ಲಿ ಸಂತ್ರಸ್ತರೆಂದು ಸಾಬೀತಾದವರಿಗೆ ಸರ್ಕಾರದಿಂದ ನಿಗದಿಪಡಿಸಿದ ಪರಿಹಾರವನ್ನು ಒದಗಿಸಬೇಕು. ಪರಿಶಿಷ್ಟ ಜಾತಿ, ಪಂಗಡಗಳ ಕಾಲೋನಿಯಲ್ಲಿ ಅಗತ್ಯವಿರುವ ರಸ್ತೆ, ಕುಡಿಯುವ ನೀರು, ಶೌಚಾಲಯ, ಚರಂಡಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.

ದೌರ್ಜನ್ಯ ಪ್ರಕರಣಗಳಲ್ಲಿ ದೂರು ಸಲ್ಲಿಸಲು ಬಂದಾಗ ಯಾವುದೇ ಕಾರಣ ನೀಡದೆ ದೂರು ಸ್ವೀಕರಿಸಿ, ಪ್ರಕರಣ ದಾಖಲಿಸಬೇಕು. ಪೊಲೀಸ್ ಠಾಣೆಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ನಿಯಮಾನುಸಾರ ವಿಲೇ ಮಾಡಲು ಕ್ರಮ ವಹಿಸಬೇಕು. ಸಮುದಾಯದ ಭವನಗಳ ನಿರ್ಮಾಣ, ಅಂಗನವಾಡಿಗಳ ದುರಸ್ಥಿ ಸೇರಿದಂತೆ ಯಾವುದೇ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಪೊಲೀಸ್ ಠಾಣೆಯಲ್ಲಿ ದಾಖಲಾದ ದೌರ್ಜನ್ಯ ಪ್ರಕರಣಗಳಲ್ಲಿ ವಿಳಂಬವಿಲ್ಲದೆ ತನಿಖೆ ನಡೆಯುತ್ತಿದ್ದು, ಸಂತ್ರಸ್ತರಿಗೆ ಅಗತ್ಯ ಪರಿಹಾರ ಒದಗಿಸಲಾಗಿದೆ. ಪ್ರತಿ ಪೊಲೀಸ್ ಠಾಣೆಯಲ್ಲಿಯೂ ತಿಂಗಳ ಎರಡನೇ ಭಾನುವಾರದಂದು ಸಭೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜು ತಳವಾರ ಮಾತನಾಡಿ, ಕಳೆದ ಸಭೆಯಲ್ಲಿ ಚರ್ಚಿಸಿದಂತೆ ಕೊಪ್ಪಳ ಕೇಂದ್ರ ಸ್ಥಾನದಲ್ಲಿ ಬಾಬು ಜಗಜೀವನರಾಂ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಕಾಮಗಾರಿಯ ಅಂದಾಜು ಪತ್ರಿಕೆಯು ಸಲ್ಲಿಕೆಯಾಗಿದ್ದು, ಕೇಂದ್ರ ಕಚೇರಿಗೆ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಾರ್ಯಾಲಯ ಪ್ರಾರಂಭಿಸುವ ಸಲುವಾಗಿ ಮೂಲಭೂತ ಸೌಕರ್ಯಗಳು ಮತ್ತು ಕಟ್ಟಡವನ್ನು ಭವನಕ್ಕಾಗಿ ಉಪಯೋಗಿಸುವಾಗ ಅನುಕೂಲವಾಗುವಂತ ಸ್ನಾನಗೃಹಗಳ ನಿರ್ಮಾಣಕ್ಕಾಗಿ ಕೆಆರ್ಐಡಿಎಲ್ ಕೊಪ್ಪಳ ಅವರು ರೂ.10 ಲಕ್ಷಗಳ ಅಂದಾಜು ಪತ್ರಿಕೆಯನ್ನು ಸಲ್ಲಿಸಿದ್ದು, ಅದರನ್ವಯ ತಾಲ್ಲೂಕು ಕಚೇರಿ ಪ್ರಾರಂಭಿಸಲು ಇಲಾಖೆಯ ಆಯುಕ್ತರಿಗೆ ಅನುಮತಿಗಾಗಿ ಕೋರಲಾಗಿದೆ. ಸಮಿತಿ ಸದಸ್ಯರು ಪ್ರಸ್ತಾಪಿಸಿದ ವಿವಿಧ ವಿಷಯಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

2023ನೇ ಕ್ಯಾಲೆಂಡರ್ ವರ್ಷದಲ್ಲಿ ಒಟ್ಟು 37 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, 9 ಪ್ರಕರಣಗಳು ಎಫ್ಐಆರ್, 22 ಪ್ರಕರಣಗಳು ಚಾರ್ಜ್ಶೀಟ್ ಹಂತದಲ್ಲಿದ್ದು, ಒಟ್ಟು 31 ಪ್ರಕರಣಗಳಲ್ಲಿ ರೂ.80,75,000 ಗಳ ಪರಿಹಾರಧನವನ್ನು ಮಂಜೂರಿಸಲಾಗಿದೆ. ಜಿಲ್ಲಾ ಹಂತದಲ್ಲಿ ಪರಿಹಾರ ಮಂಜೂರಾತಿಗಾಗಿ 6 ಪ್ರಕರಣಗಳು ಬಾಕಿ ಇವೆ. ಉಳಿದಂತೆ ಇದೇ ಕ್ಯಾಲೆಂಡರ್ ವರ್ಷದಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಾರಂಭಿಕ ಶಿಲ್ಕು 268 ಹಾಗೂ 33 ಹೊಸ ಪ್ರಕರಣಗಳನ್ನು ಒಳಗೊಂಡಂತೆ ಒಟ್ಟು 301 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 58 ರಲ್ಲಿ ಬಿಡುಗಡೆ, 2 ರಲ್ಲಿ ಶಿಕ್ಷೆ, ಇತರೆ 2 ಸೇರಿದಂತೆ 62 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. 206 ಪ್ರಕರಣಗಳು ಬಾಕಿ ಉಳಿದಿವೆ. ದಾಖಲಾದ ದೌರ್ಜನ್ಯ ಪ್ರಕರಣಗಳಲ್ಲಿ ವಿಳಂಬವಿಲ್ಲದೆ ಪರಿಹಾರಧನ ಮಂಜೂರಾತಿಗೆ ಕ್ರಮ ವಹಿಸಿ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕಾವ್ಯಾರಾಣಿ, ಕೊಪ್ಪಳ ನಗರಸಭೆ ಪೌರಾಯುಕ್ತರಾದ ಗಣಪತಿ, ಕುಷ್ಟಗಿ ತಹಶೀಲ್ದಾರ ಶೃತಿ, ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ದ್ಯಾಮಣ್ಣ ಗೊಂದಿ, ಚಂದಾಲಿಂಗಪ್ಪ ಮಾದರ, ಸುಂಕಪ್ಪ ಕೆ.ಮಾಲಗಿತ್ತಿ, ಮರಳಸಿದ್ದಪ್ಪ ಪೂಜಾರ, ಮಾರುತಿ ಚಾಮಲಾಪುರ, ಚಂದ್ರಪ್ಪ ತಳೂರ, ಮಾಲತಿ ನಾಯಕ, ಸತೀಶ ಮೋರನಾಳ, ಸಿದ್ದು ಮಣ್ಣಿನವರ ಸೇರಿದಂತೆ ಇನ್ನಿತರ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

You Might Also Like

 ಯುವಜನೋತ್ಸವ: ಹೆಸರು ನೋಂದಾಯಿಸಲು ಸೂಚನೆ | BulletsIn
ನಾಡಿದ್ದು ಮೈಸೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ | BulletsIn
ಮುಂದಿನ ವಾರ ಪ್ರತಿಪಕ್ಷ ನಾಯಕನ ಆಯ್ಕೆ- ಬಿವೈ ವಿಜಯೇಂದ್ರ
ಸಾರ್ವಜನಿಕರ ಸದುಪಯೋಗಕ್ಕೆ ನಿಯಂತ್ರಣ ಕೊಠಡಿ – Hindusthan Samachar Kannada
ಗ್ಯಾರಂಟಿ ಯೋಜನೆಗಳಲ್ಲಿ ರಾಜ್ಯಕ್ಕೆ ಮಾದರಿಯಾಗುತ್ತಿದೆ ಗದಗ ಜಿಲ್ಲೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಅಭಿಮಾನಿಗಳ ಸಾವು: ಸೂರಣಗಿಗೆ ಯಶ್ ಪ್ರಯಾಣ
Next Article ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮುಖಭಂಗ : ಜೆಡಿಎಸ್ ಟೀಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?