
ಬಳ್ಳಾರಿ, 26 ನವೆಂಬರ್ (ಹಿ.ಸ.) :
ಆ್ಯಂಕರ್ : ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿರುವುದನ್ನು ವಿರೋಧಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್‍ನ ಬಳ್ಳಾರಿ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಬುಧವಾರ ಸಲ್ಲಿಸಿದೆ.
21 ನವೆಂಬರ್ 2025ರಂದು ಪ್ರಕಟಿಸಲಾಗಿರುವ ಅಧಿಸೂಚನೆಯು ನಾಲ್ಕು ಕಾರ್ಮಿಕ ಸಂಹಿತೆಗಳ ನಿರಂಕುಶ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಧಿಕ್ಕರಿಸುತ್ತದೆ. ಭಾರತದ ಕಲ್ಯಾಣ ರಾಜ್ಯದ ಸ್ವರೂಪವನ್ನು ಧ್ವಸಗೊಳಿಸಿದೆ. ಅಸ್ತಿತ್ವದಲ್ಲಿದ್ದ 29 ಕೇಂದ್ರ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಜಾರಿಗೆ ತಂದ ದಿನದಿಂದಲೂ 10 ಕೇಂದ್ರ ಕಾರ್ಮಿಕ ಸಂಘಗಳು ಮತ್ತು ಸ್ವತಂತ್ರ ಕೈಗಾರಿಕಾ ಒಕ್ಕೂಟಗಳ ಜಂಟಿ ವೇದಿಕೆಯು ಮತ್ತು ಸಿಐಟಿಯು ಈ ಸಂಹಿತೆಗಳ ಜಾರಿಯನ್ನು ನಾವು ವಿರೋಧಿಸುತ್ತಿದ್ದು, ಕರ್ನಾಟಕದಲ್ಲಿ ಈ ಕಾಯ್ದೆಗಳ ಜಾರಿ ಮಾಡಬಾರದು ಎಂದು ಸಂಘಟನೆಯು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದೆ.
ಕೇಂದ್ರ ಕಾರ್ಮಿಕ ಸಂಘಗಳ ಯಾವುದೇ ಮನವಿಗಳು ಪ್ರತಿಭಟನೆಗಳು ಮತ್ತು ಮುಷ್ಕರಗಳನ್ನು ಗಣನೆಗೆ ತೆಗೆದುಕೊಳ್ಳದೆ ಉದ್ಯೋಗದಾತರ ಪ್ರತಿನಿಧಿಗಳು ಇತರ ಬೆಂಬಲಿಗರು ಬಜೆಟ್ ಪೂರ್ವ ಸಮಾಲೋಚನಾ ಸಭೆಯಲ್ಲಿ ಇಟ್ಟ ಬೇಡಿಕೆಗಳನ್ನು ಈಡೇರಿಸಲು ಈ ಕೇಂದ್ರ ಸರ್ಕಾರವು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿದೆ.
ಪ್ರಜಾಸತ್ತಾತ್ಮಕ ಅತ್ಯಂತ ಪ್ರತಿಗಾಮಿ ಕಾರ್ಮಿಕ ವಿರೋಧಿ ಮತ್ತು ಮಾಲೀಕರ ಪರ ಎಂದು ಖಂಡಿಸುತ್ತಲೇ ದುಡಿಯುವ ಜನರ ಮೇಲಿನ ಈ ಮಾರಣಾಂತಿಕ ದಾಳಿಯನ್ನು ಇತಿಹಾಸದಲ್ಲಿಯೇ ಅತ್ಯಂತ ಉಗ್ರ ಮತ್ತು ಸಂಘಟಿತ ಹೋರಾಟದ ಮೂಲಕ ಎದಿರಿಸಲಾಗುವುದು ಎಂದು ಜೆಸಿಟಿಯು ಜಂಟಿ ವೇದಿಕೆಯು ಸ್ಪಷ್ಟಪಡಿಸಿದೆ.
ಸಿಐಟಿಯು ರಾಜ್ಯ ಉಪಾಧ್ಯಕ್ಷರಾದ ಜೆ. ಸತ್ಯಬಾಬು ಅವರು ಪ್ರತಿಭಟನೆಯ ನೇತೃತ್ವವನ್ನುವಹಿಸಿದ್ದರು. ಎ. ಮಲ್ಲಮ್ಮ, ಎಂ. ತಿಪ್ಪೇಸ್ವಾಮಿ, ಟಿ.ಜಿ. ವಿಠ್ಠಲ್ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್
