
ವಿಜಯಪುರ, 23 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾ ಆಡಳಿತ ಬಸವನಬಾಗೇವಾಡಿ ಇವರ ಸಂಯುಕ್ತಾಶ್ರಯದಲ್ಲಿ ಆ.30ರಂದು ಕಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಬಸವನಬಾಗೇವಾಡಿ ತಾಲೂಕಾ ತಹಶೀಲ್ದಾರ ಕಾರ್ಯಾಲಯದ ಸಭಾ ಭವನದಲ್ಲಿ ಅಭಿಯಾನವನ್ನು ಜಿಲ್ಲಾ ನ್ಯಾಯಾಧೀಶರು ಹಾಗೂ ಕಲಬ್ಬುರ್ಗಿ ಕಾಯಂ ಜನತಾ ನ್ಯಾಯಾಲಯ ಅಧ್ಯಕ್ಷರಾದ ನ್ಯಾಯಾಧೀಶ ಎಸ್.ಎಲ್.ಚವ್ಹಾಣ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಸವನಬಾಗೇವಾಡಿ ತಹಶೀಲ್ದಾರ ವಾಯ್.ಎಸ್.ಸೋಮನಕಟ್ಟಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ಹಿರಿಯ ಸಿವಿಲ್ ನ್ಯಾಯಾಧೀಶ ಶಶಿಧರ ಎಂ.ಗೌಡ, ಕಲಬುರಗಿ ಕಾಯಂ ಜನತಾ ನ್ಯಾಯಾಲಯದ ಸದಸ್ಯರಾದ ನ್ಯಾಯಾಧೀಶ ವಿಜಯ ವಿಠ್ಠಲ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ ಮುಸಲ್ಮಾರಿ, ಸಿವಿಲ್ ನ್ಯಾಯಾಧೀಶರಾದ ಅಮಿತ ಘಟ್ಟಿ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಈರಪ್ಪ ಢವಳೇಶ್ವರ, ಬಾಗೇವಾಡಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ, ಡಿವೈಎಸ್‍ಪಿ ಬಲ್ಲಪ್ಪ ನಂದಗಾಂವಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಿ.ಸಿದ್ದಯ್ಯ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿಗಳು ಹಾಗೂ ಮಧ್ಯಸ್ಥಗಾರರಾದ ವಿ.ಬಿ.ಮರ್ತುರ ಹಾಗೂ ನ್ಯಾಯವಾದಿ ಶ್ರೀಮತಿ ಪಿ.ಬಿ.ಪತ್ತಾರ ಅತಿಥಿ ಉಪನ್ಯಾಸಕರಾಗಿ ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande
