• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ
Regional

ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ

CliQ INDIA
Last updated: July 5, 2025 11:10 pm
CliQ INDIA
Share
3 Min Read
SHARE

ಕೊಪ್ಪಳ, 05 ಜುಲೈ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಯಲಬುರ್ಗಾ, ಪ್ರಾಥಮಿಕ ಆರೋಗ್ಯ ಕೇಂದ್ರ, ಬೇವೂರು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಬೇವೂರು ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸಭಾಭವನದಲ್ಲಿ ಬಾಲ್ಯವಿವಾಹ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ವ್ಹಿ.ಪಿ ಅವರು ಮಾತನಾಡಿ, ಬಾಲ್ಯವಿವಾಹ ನಮ್ಮ ಸಮಾಜದ ಒಂದು ಸವಾಲಾಗಿದೆ. ಇದರ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ ಯುವಜನತೆಗೆ ಮತ್ತು ಪಾಲಕರಿಗೆ ಅರಿವು ಮೂಡಿಸಬೇಕು. ಬಾಲ್ಯವಿವಾಹ ಎಂದರೆ ಯಾವುದೇ 18 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಅಥವಾ 21 ವರ್ಷದೊಳಗಿನ ಗಂಡುಮಕ್ಕಳಿಗೆ ಮದುವೆ ಮಾಡುವುದಕ್ಕೆ ಬಾಲ್ಯವಿವಾಹ ಎಂದು ಕರೆಯುತ್ತಾರೆ.

ಬಾಲ್ಯವಿವಾಹಕ್ಕೆ ಕಾರಣಗಳೆಂದರೆ ಬಡತನ, ಅನಕ್ಷರತೆ, ಮೂಢನಂಬಿಕೆ, ಬಾಲ್ಯವಿವಾಹದ ದುಷ್ಪರಿಣಾಮದ ಬಗ್ಗೆ ಅರಿವು ಇಲ್ಲದೇ ಇರುವುದು, ರಕ್ತ ಸಂಬಂಧವನ್ನು ಉಳಿಸಿಕೊಳ್ಳುವುದು, ಕುಟುಂಬ ಆಸ್ತಿಯನ್ನು ಉಳಿಸಿಕೊಳ್ಳುವುದು, ಪಾಲಕರು ಮದುವೆ ಮಾಡಿ ತಮ್ಮ ಜವಾಬ್ದಾರಿಯನ್ನು ಕಳೆದುಕೊಳ್ಳುವುದು, ಸಾಮೂಹಿಕ ವಿವಾಹದಲ್ಲಿ ಕಡಿಮೆ ಖರ್ಚು ಆಗುತ್ತದೆ ಎಂಬ ಭಾವನೆ, ವೃದ್ಧರು ಹಾಗೂ ಅನಾರೋಗ್ಯದ ಹಿರಿಯರ ಆಸೆ ಈಡೇರಿಸುವ ಉದ್ದೇಶದಿಂದ ಬಾಲ್ಯವಿವಾಹ ಮಾಡುತ್ತಾರೆ. ಬಾಲ್ಯವಿವಾಹ ಮಾಡುವುದರಿಂದ ಯುವಜನತೆಯ ಆರೋಗ್ಯ ಮತ್ತು ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಬಾಲ್ಯವಿವಾಹ ಮಾಡುವುದರಿಂದ ಇಬ್ಬರಿಗೂ ವಯಸ್ಸಿಗೆ ಮೀರಿದ ಜವಾಬ್ದಾರಿ ಹೊರಿಸಿದಂತಾಗುತ್ತದೆ. ಅಪ್ರಾಪ್ತ ವಯಸ್ಸಿನಲ್ಲಿ ಗರ್ಭಿಣಿಯಾಗುವುದರಿಂದ ಗರ್ಭಕೋಶದ ಬೆಳವಣಿಗೆ ಪೂರ್ಣಗೊಳ್ಳದೆ ಹೆರಿಗೆ ಸಮಯದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇರುತ್ತದೆ. ವಿಕಲಾಂಗ ಮಕ್ಕಳ ಜನನ ಉಂಟಾಗುತ್ತದೆ. ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಹಾಗೂ ಬಲತ್ಕಾರಕ್ಕೆ ಒಳಗಾಗುತ್ತಾರೆ. ಲೈಂಗಿಕ ಖಾಯಿಲೆಗಳಿಂದ ಹೆಚ್.ಐ.ವಿ/ಏಡ್ಸ್ ರೋಗಕ್ಕೆ ಗುರಿಯಾಗುವ ಸಾಧ್ಯತೆ ಇರುತ್ತದೆ ಹಾಗೂ ರಕ್ತಹೀನತೆ ಉಂಟಾಗುತ್ತದೆ ಮತ್ತು ಕಡಿಮೆ ತೂಕದ ಮಗುವಿನ ಜನನವಾಗುವ ಸಾಧ್ಯತೆ ಇರುತ್ತದೆ.

ಶಿಶುಗಳ ದೈಹಿಕ ಬೆಳವಣಿಗೆ ಕುಂಠಿತವಾಗುತ್ತದೆ. ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಗ್ರಾಮಗಳಲ್ಲಿ/ವಾರ್ಡ್‍ಗಳಲ್ಲಿ ಬಾಲ್ಯವಿವಾಹ ನಿಷೇಧ ಕುರಿತು, ನಿರಂತರವಾಗಿ ಪಾಲಕರಿಗೆ ಅರಿವು ಮೂಡಿಸಬೇಕು. ಬಾಲ್ಯವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ ಬಾಲ್ಯವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಇದನ್ನು ಮಾಡುವವರಿಗೆ ಮತ್ತು ಮಾಡಿಸುವವರಿಗೆ ದಂಡ ಮತ್ತು ಜೈಲುಶಿಕ್ಷೆ ಮತ್ತು 1 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಕೊಪ್ಪಳವನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ವಿದ್ಯಾರ್ಥಿಗಳು ನಾಯಕತ್ವ ವಹಿಸಿಕೊಂಡು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದ ಅವರು ಬಾಲ್ಯವಿವಾಹ ಕಂಡುಬಂದಲ್ಲಿ 1098 ಸಂಖ್ಯೆಗೆ ಕರೆಮಾಡಿ ಬಾಲ್ಯ ವಿವಾಹ ನಿಯಂತ್ರಣ ಮಾಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಎಸ್.ಟಿ.ಎಸ್. ಕೃಷ್ಣಾಜೀ ಅವರು ಮಾತನಾಡಿ, ಕ್ಷಯರೋಗ ನಿರ್ಮೂಲನೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ವಿವರಿಸಿದರು. ಸಮುದಾಯ ಆರೋಗ್ಯಾಧಿಕಾರಿ ಮಂಜುಳಾ ಅವರು ಅಸಾಂಕ್ರಾಮಿಕ ರೋಗಗಳು, ಮಳೆಗಾಲದಲ್ಲಿ ಸೋಂಕಿತ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ, ಚಿಕನ್‍ಗುನ್ಯಾ, ಮಲೇರಿಯಾ, ಮೆದುಳುಜ್ವರ, ಆನೆಕಾಲುರೋಗ ಹರಡದಂತೆ, ತಾಯಿ ಮಕ್ಕಳ ಆರೋಗ್ಯ ರಕ್ಷಣೆ, ಕುಟುಂಬ ಕಲ್ಯಾಣ ಕಾರ್ಯಕ್ರಮ, ಕುಷ್ಠರೋಗ ನಿರ್ಮೂಲನೆ ಕಾರ್ಯಕ್ರಮಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಇವರು ಬಾಲ್ಯ ವಿವಾಹ ತಡೆಗಟ್ಟುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ. ಇಲಾಖೆಗಳು ಜಾಗೃತಿ ಮೂಡಿಸಿದರೆ ಸಾಲದು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಬಲವಾದ ಕಾನೂನುಗಳಿಂದ ಮಾತ್ರ ಬಾಲ್ಯ ವಿವಾಹ ನಿಷೇಧ ಮಾಡಲು ಸಾಧ್ಯ, ಆರೋಗ್ಯ ಇಲಾಖೆಯ ಜಾಗೃತಿ ಕಾರ್ಯಕ್ರಮಗಳು ಹದಿ-ಹರೆಯದವರಿಗೆ ಬಹಳಷ್ಟು ಉಪಯುಕ್ತವಾಗಿವೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಹ ಉಪನ್ಯಾಸಕರಾದ ಹೆಚ್.ಎ ಹಿರೇಮಠ, ಅತಿಥಿ ಉಪನ್ಯಾಸಕರು, ಆಶಾ ಕಾರ್ಯಕರ್ತೆಯರಾದ ಅನ್ನಪೂರ್ಣ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

You Might Also Like

ರಾಜ್ಯ ರಾಜಕೀಯದಲ್ಲಿ ಕಮಿಷನ್‌ ಗಿರಾಕಿ ವಿವಾದ : ಆರ್. ಅಶೋಕ ಕಿಡಿ
ಅಕ್ರಮ ಮನೆಗಳ ತೆರವು ಕಾರ್ಯಾಚರಣೆ – Hindusthan Samachar Kannada
ಮುಖಾಮುಖಿ ಲಾರಿ ಡಿಕ್ಕಿ ; ಸ್ಥಳದಲ್ಲೇ ಮೂವರ ಸಾವು
ಸರಕಾರಿ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ನಿಷೇಧ ; ಬಿಜೆಪಿ ಸರಕಾರದ ನಿರ್ಣಯ-ಗುಂಡೂರಾವ್
ಸೆಪ್ಟೆಂಬರ್ 24ರಿಂದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮತ್ತೆ ಮಳೆ | BulletsIn

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಪ್ರಧಾನಿ ನರೇಂದ್ರ ಮೋದಿ ಅರ್ಜೆಂಟೀನಾ ಭೇಟಿ
Next Article ಮಣಿಪುರ : ಉಗ್ರನ ಬಂಧನ ; ಶಸ್ತ್ರಾಸ್ತ್ರ, ಸ್ಫೋಟಕಗಳು ವಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?