ಬೆಂಗಳೂರು, 19ಜನವರಿ(ಹಿ.ಸ):
ಆ್ಯಂಕರ್ :
ಬೆಂಗಳೂರು ಹಾಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.
ಹೊನ್ನಾವರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್
