ಬೆಂಗಳೂರು, 17 ಡಿಸೆಂಬರ್(ಹಿ.ಸ):
ಆ್ಯಂಕರ್ :
ದೇಶದ ಪ್ರಮುಖ ನಗರಗಳಲ್ಲಿ ಟ್ರಾಫಿಕ್ ಸಮಸ್ಸೆ ಸಾಮಾನ್ಯವಾಗಿದೆ. ಆದರೆ ಬೆಂಗಳೂರಿನಲ್ಲಿ ತುಸು ಹೆಚ್ಚೇ ಇದೆ. ಬಹುತೇಕ ರಸ್ತೆಗಳು ಸಂಚಾರ ದಟ್ಟಣೆಯಿಂದ ಬೆಂಗಳೂರಿಗರು ಪರದಾಡುತ್ತಿದ್ದಾರೆ. ಮೆಟ್ರೋ ಮಾರ್ಗಗಳ ವಿಸ್ತರಣೆ ಸೇರಿದಂತೆ ಹಲವು ಪರಿಹಾರಗಳನ್ನು ಕೈಗೊಳ್ಳಲಾಗಿದ್ದರೂ, ಟ್ರಾಫಿಕ್ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಇದೀಗ ಬೆಂಗಳೂರು ಪೊಲೀಸರು ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗಿದ್ದಾರೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಹಾಡಲು ಪೊಲೀಸರ ಜೊತೆ ನಿಟ್ಟೆ ಮೀನಾಕ್ಷಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕೈಜೋಡಿಸಿದೆ.
ಗರದ ಟ್ರಾಫಿಕ್ ಸಮಸ್ಯೆ ನಿವಾರಿಸಲು ತಾಂತ್ರಿಕ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನಿಟ್ಟೆ ಮೀನಾಕ್ಷಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಬೆಂಗಳೂರು ಟ್ರಾಫಿಕ್ ಪೊಲೀಸರು ಮಹತ್ತರ ಒಂಪ್ಪದಕ್ಕೆ ಸಹಿ ಹಾಕಿದ್ದಾರೆ. ಇದೇ ವೇಳೆ ಮಾತನಾಡಿದ ಬೆಂಗಳೂರು ಟ್ರಾಫಿಕ್ ಪೊಲೀಸ್ ಜಂಟಿ ಆಯುಕ್ತ ಎಂ ಎನ್ ಅನುಚೇತ್, ಬೆಂಗಳೂರಿನ ಟ್ರಾಫಿಕ್ ಕೇವಲ ಸಾರಿಗೆ ಸಮಸ್ಯೆಯಲ್ಲ, ಇದು ಆರ್ಥಿಕ ಮತ್ತು ಪರಿಸರ ಸಮಸ್ಯೆಯಾಗಿದೆ.ಹೀಗಾಗಿ ಸೂಕ್ತ ಪರಿಹಾರ ಅಗತ್ಯ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
