ಮೈಸೂರು, 26 ಡಿಸೆಂಬರ್(ಹಿ.ಸ):
ಆ್ಯಂಕರ್ :
ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಚಾಮರಾಜೇಂದ್ರ ಮೃಗಾಲಯದ ವಾರದ ರಜೆ ರದ್ದು ಮಾಡಲಾಗಿದೆ. ಹೀಗಾಗಿ ಮೃಗಾಲಯ ಇಂದು (ಡಿ.26) ಸಹ ತೆರೆಯಲಿದೆ. ಪ್ರತಿ ಮಂಗಳವಾರ ಮೃಗಾಲಯಕ್ಕೆ ವಾರದ ರಜೆ ಇರುತ್ತದೆ. ಆದರೆ ಈ ಬಾರಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರಿಗೆ ಆಗಮಿಸಿರುವ ಹಿನ್ನೆಲೆಯಲ್ಲಿ ವಾರದ ರಜೆ ರದ್ದು ಮಾಡಿ, ಎಂದಿನಂತೆ ಮೃಗಾಲಯ ತೆರೆದಿರಲಿದೆ ಎಂದು ಮೃಗಾಲಯದ ಕಾರ್ಯ ನಿರ್ವಾಹಕ ನಿರ್ದೇಶಕ ಡಿ ಮಹೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ದಾಖಲೆ ಪ್ರಮಾಣದಲ್ಲಿ ಪ್ರವಾಸಿಗರ ಆಗಮನ
ಸಾಲು ಸಾಲು ರಜೆಯ ಕಾರಣದಿಂದಾಗಿ ಮೃಗಾಲಯಕ್ಕೆ ಶನಿವಾರದಿಂದ ಸೋಮವಾರದವರೆಗೆ ದಾಖಲೆ ಸಂಖ್ಯೆಯಲ್ಲಿ ಅಂದರೆ 1.01 ಲಕ್ಷ ಸಂದರ್ಶಕರು ಭೇಟಿ ನೀಡಿದ್ದರು. ಕಳೆದ ವರ್ಷ ಇದೇ ದಿನಗಳಲ್ಲಿ ಒಟ್ಟು 77,833 ಮಂದಿ ಬಂದಿದ್ದರು.
ಹಿಂದೂಸ್ತಾನ್ ಸಮಾಚಾರ್
