ವಿಜಯಪುರ, 22 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮದ್ಯದ ಅಂಗಡಿ ಬಂದ್ ಮಾಡುವಂತೆ ಆಗ್ರಹಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಹುಬನೂರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ವಿಜಯಪುರದ ಹುಬನೂರ ಗ್ರಾಮದಲ್ಲಿ ಎಂಎಸ್‌ಐಎಲ್ ಮದ್ಯದ ಅಂಡಗಿ ಆರಂಭಿಸಲಾಗಿದೆ. ಇದರಿಂದ ಗ್ರಾಮದ ಯುವಕರು, ಪುರುಷರು ಮದ್ಯಕ್ಕೆ ದಾಸರಾಗುತ್ತಿದ್ದಾರೆ. ಅಲ್ಲದೇ, ಹುಬನೂರ ಗ್ರಾಮದಲ್ಲಿ ಆರಂಭಿಸಲಾದ ಮದ್ಯದ ಅಂಗಡಿಯಿಂದ ಕಾಲೇಜು, ಹೈಸ್ಕೂಲ್ ವಿದ್ಯಾರ್ಥಿಗಳು ಜೀವನ ಹಾಳಾಗುತ್ತಿದೆ. ಅದಕ್ಕಾಗಿ ಹುಬನೂರ ಗ್ರಾಮದಲ್ಲಿ ಆರಂಭಿಸಲಾದ ಮದ್ಯದ ಅಂಗಡಿ ಸ್ಥಳಾಂತರ ಮಾಡಬೇಕು ಇಲ್ವೇ ಬಂದ್ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande
