ಬೆಂಗಳೂರು, 7 ಜನವರಿ(ಹಿ.ಸ):
ಆ್ಯಂಕರ್ :ಕರ್ನಾಟಕದಾದ್ಯಂತ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಅಲ್ಲಲ್ಲಿ ಮಳೆಯಾಗಿದೆ. ಚಳಿ ಕೊಂಚ ಬಿಡುವು ಪಡೆದಿದೆ, ಇಂದು ಮೋಡಗಳ ನಡುವೆಯೇ ಸೂರ್ಯ ಇಣುಕಿದ್ದಾನೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಿದೆ.
ಹಿಂದೂಸ್ತಾನ್ ಸಮಾಚಾರ್
