ಬೆಂಗಳೂರು,27 ನವೆಂಬರ್ (ಹಿ.ಸ):
ಆ್ಯಂಕರ್ :
ಬೆಂಗಳೂರು, ನವೆಂಬರ್ 27 (ಕರ್ನಾಟಕ ವಾರ್ತೆ):- ಮುಖ್ಯ ಕಾರ್ಯದರ್ಶಿ ಹುದ್ದೆಗೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್ ಅವರು ನೇಮಕಗೊಂಡಿರುವ ಹಿನ್ನೆಲೆಯಲ್ಲಿ, ಅವರಿಂದ ತೆರವಾಗುವ ಹುದ್ದೆಗೆ ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರನ್ನು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ಎಲ್.ಕೆ. ಅತೀಕ್ ಅವರಿಗೆ ವಹಿಸಿ ಆದೇಶಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್
