ಬೆಂಗಳೂರು , 17 ನವೆಂಬರ್ (ಹಿ.ಸ):
ಆ್ಯಂಕರ್ : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್ ಹಾಗೂ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಡಾಲರ್ಸ್ ಕಾಲೋನಿಯ ಮನೆಯಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಹಾಗೂ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಜಿ.ವಿ, ಶಾಸಕರಾದ ಸುರೇಶ್ ಗೌಡ ಅವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್
