ಶಿವಮೊಗ್ಗ, 12 ಜನವರಿ(ಹಿ.ಸ):
ಆ್ಯಂಕರ್ : ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದನೇ ಉಚಿತ ಗ್ಯಾರಂಟಿ ಯೋಜನೆ ಯುವ ನಿಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಚಾಲನೆ ನೀಡಿದರು. ಬಿಜೆಪಿ ಭದ್ರಕೋಟೆ ಶಿವಮೊಗ್ಗದಲ್ಲೇ ಯೋಜನೆಗೆ ಚಾಲನೆ ನೀಡಲಾಗಿದ್ದು, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೇರಿದಂತೆ ವಿವಿಧ ಸಚಿವರು, ಪಕ್ಷದ ನಾಯಕರು ಸಮಾರಂಭದಲ್ಲಿ ಹಾಜರಿದ್ದರು. ಯುವ ನಿಧಿ ಯೋಜನೆಗೂ ಚಾಲನೆ ನೀಡುವ ಮೂಲಕ ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಐದೂ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದಂತಾಗಿದೆ.
ಹಿಂದೂಸ್ತಾನ್ ಸಮಾಚಾರ್
