
ಬೆಂಗಳೂರು,24ನವೆಂಬರ್ (ಹಿ.ಸ):
ಆ್ಯಂಕರ್ :
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ (29) ಅವರ ಮನೆಯಲ್ಲಿ ಸೂತಕದ ಛಾಯೆ ಆವರಿಸಿ ಇಡೀ ಕುಟುಂಬ ಶೋಕಸಾಗರದಲ್ಲಿ ಮುಳುಗಿದೆ.
ನಗರದ ಜಿಗಣಿಯ ನಂದನವನ ಬಡಾವಣೆಯಲ್ಲಿ ಪ್ರಾಂಜಲ್ ಅವರ ತಂದೆ ತಾಯಿ ವಾಸವಾಗಿದ್ದು, ಗುರುವಾರ ಇಡೀ ದಿನ ಸಂಬಂಧಿಕರು, ಸೇನಾಧಿಕಾರಿಗಳು, ರಾಜ್ಯ ಸರ್ಕಾರದ ಅಧಿಕಾರಿಗಳು ಆಗಮಿಸಿ ಸಾಂತ್ವನ ಹೇಳಿದರು. ಪ್ರಾಂಜಲ್ ಪಾರ್ಥಿವ ಶರೀರ ಶುಕ್ರವಾರ ಸಂಜೆ ಬಳಿಕ ಬರುವ ನಿರೀಕ್ಷೆಯಿದ್ದು, ಸೇನೆಯ ಶಿಷ್ಟಾಚಾರ, ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಪಾಕಿಸ್ತಾನದ ಉಗ್ರನನ್ನು ಭಾರತೀಯ ಸೇನೆ ಹತ್ಯೆಗೈದಿದೆ. ಆದರೆ, ಅದಕ್ಕೂ ಮುನ್ನ ಉಗ್ರರು ಹಾಗೂ ಸೇನೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕದ ಯೋಧ ಪ್ರಾಂಜಲ್ ಸೇರಿ ನಾಲ್ವರು ಹುತಾತ್ಮರಾದರು.:
ಹಿಂದೂಸ್ತಾನ್ ಸಮಾಚಾರ್
