ಬೆಂಗಳೂರು, 20 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ ಜಿಲ್ಲೆಗೆ ಕೆಂಪು ಎಚ್ಚರಿಕೆ ನೀಡಲಾಗಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಕಿತ್ತಳೆ ಎಚ್ಚರಿಕೆ ನೀಡಲಾಗಿದೆ.
ಹಾಸನ, ಧಾರವಾಡ ಜಿಲ್ಲೆಗೆ ಹಳದಿ ಎಚ್ಚರಿಕೆ ಘೋಷಿಸಲಾಗಿದೆ.
ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ವಿಜಯನಗರ, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
