ಬೆಂಗಳೂರು, 19 ಆಗಸ್ಟ್ (ಹಿ.ಸ.):
ಆ್ಯಂಕರ್:
ರಾಜ್ಯದಾದ್ಯಂತ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಕೆಂಪು ಎಚ್ಚರಿಕೆ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಹಾಸನ, ಕೊಡಗು ಜಿಲ್ಲೆಗಳಿಗೆ ಕಿತ್ತಳೆ ಎಚ್ಚರಿಕೆ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ. ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ದಾವಣಗೆರೆಗೆ ಹಳದಿ ಎಚ್ಚರಿಕೆ ನೀಡಲಾಗಿದೆ.
—————
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
