• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ರೈತರ ಸಂಕಷ್ಟಕ್ಕೆ ಸ್ಪಂ ದಿಸದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
Regional

ರೈತರ ಸಂಕಷ್ಟಕ್ಕೆ ಸ್ಪಂ ದಿಸದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

CliQ INDIA
Last updated: December 10, 2025 10:46 am
CliQ INDIA
Share
3 Min Read
SHARE

ಕೋಲಾರ, ೦೯ ಡಿಸೆಂಬರ್ (ಹಿ.ಸ) :

ಆ್ಯಂಕರ್ : ರಾಜ್ಯದ ರೈತ ಸಮುದಾಯ ಸಂಕಷ್ಟದಲ್ಲಿದೆ. ಅತಿವೃಷ್ಠಿ ಮತ್ತು ಅನಾವೃಷ್ಟಿಯಿಂದ ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ. ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ಬದಲು ರಾಜ್ಯ ಸರ್ಕಾರ ಅಧಿಕಾರದ ಅಮಲಿನಲ್ಲಿ ರೈತರನ್ನು ನಿರ್ಲಕ್ಷö್ಯ ಮಾಡಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಅಧಿಕಾರಕ್ಕಾಗಿ ಕಚ್ಚಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ರೈತರಿಗೆ ನೆರವಾಗಲು ಬಿಜೆಪಿ ಚಾಮರಾಜನಗರ ಜಿಲ್ಲೆಯಿಂದ ಹಿಡಿದು ಬೀದರ್ ತನಕ ರಾಜ್ಯವ್ಯಾಪಿ ಪ್ರತಿಭಟನೆ ಹಮ್ಮಿಕೊಂಡಿದೆ. ರಾಜ್ಯ ಸರ್ಕಾರ ಅಧಿಕಾರದಿಂದ ನಿರ್ಗಮಿಸುವ ತನಕ ಮುಂದುವರೆಯಲಿದೆ ಎಂದು ಕೋಲಾರದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರವು ಅಧಿವೇಶನದಲ್ಲಿ ರೈತರ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ವಹಿಸುವಂತೆ ಆಗ್ರಹಿಸಿ ನಗರದಲ್ಲಿ ಮಂಗಳವಾರ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಮೆಕ್ಕೆ ವೃತ್ತದಲ್ಲಿ ಜಮಾಗೊಂಡ ಬಿಜೆಪಿ ಮತ್ತು ರೈತ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ ನಂತರ ಎತ್ತಿನ ಬಂಡೆಗಳ ಜೊತೆಗೆ ಮೆರವಣಿಗೆ ಮೂಲಕ ತೋಟಗಾರಿಕೆ ಇಲಾಖೆಯ ಮುಂದೆ ಪ್ರತಿಭಟನೆ ನಡೆಸಿ ತೋಟಗಾರಿಕೆ ಮತ್ತು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ಬಿಜೆಪಿ ಪಕ್ಷದ ರಾಜ್ಯ ವಕ್ತಾರ ಅಶ್ವಥ್ ನಾರಾಯಣ್ ಮಾತನಾಡಿ ರಾಜ್ಯಾದ್ಯಂತ ಪ್ರಕೃತಿ ವಿಕೋಪಗಳಿಂದ ರೈತರು, ಹಾಲು ಉತ್ಪಾದಕರು ಹಾಗೂ ಕೃಷಿ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ರಾಜ್ಯದ ಕಾಂಗ್ರೆಸ್ ಸರ್ಕಾರವು ಪರಿಹಾರ ಧನವನ್ನು ಕೂಡಲೇ ಅವರ ಖಾತೆಗೆ ಜಮಾ ಮಾಡಬೇಕು ರೈತರ ಪ್ರತಿ ಲೀಟರ್ ಹಾಲಿನ ೫ ರೂ. ಪ್ರೊತ್ಸಾಹಧನ ೬೨೦ ಕೋಟಿ ಬಾಕಿ ಹಣವನ್ನು ಬಿಡುಗಡೆ ಮಾಡಬೇಕು ಹಾಗೂ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿದಂತೆ ಹಾಲಿನ ಪ್ರೊತ್ಸಾಹ ಧನವನ್ನು ೫ ರಿಂದ ೭ ರೂಪಾಯಿಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು

ಮಾಜಿ ಸಂಸದ ಎಸ್ ಮುನಿಸ್ವಾಮಿ ಮಾತನಾಡಿ ಹಿಂದಿನAತೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಭಾಗವಾಗಿ ಸರ್ಕಾರದಿಂದಲೇ ಪ್ರತಿ ರೈತರಿಗೆ ೪,೦೦೦ ಹಣ ನೇರವಾಗಿ ಜಮಾ ಮಾಡುವ ವ್ಯವಸ್ಥೆಯನ್ನು ಪುನಃ ಜಾರಿಗೆ ತರಬೇಕು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಯಲ್ಲಿದ್ದ ೨೫,೦೦೦ ಶುಲ್ಕದಲ್ಲಿ ರೈತರಿಗೆ ವಿದ್ಯುತ್ ಟ್ರಾನ್ಸ್ಫಾರ್ಮರ್ ಮತ್ತು ಶಾಶ್ವತ ವಿದ್ಯುತ್ ಸೌಕರ್ಯ ನೀಡುವ ವಿಶೇಷ ಯೋಜನೆ ಪುನಃ ಪ್ರಾರಂಭಿಸಬೇಕು. ರೈತರಿಗೆ ಸಹಕಾರಿ ಬ್ಯಾಂಕ್‌ಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುವ ಯೋಜನೆಯನ್ನು ಬಲಪಡಿಸಬೇಕು ಪ್ರತಿ ರೈತನಿಗೂ ಗರಿಷ್ಠ ೧೦ ಲಕ್ಷದವರೆಗೆ ಶೂನ್ಯ ಬಡ್ಡಿ ಸಾಲ ಸೌಲಭ್ಯ ಕಲ್ಪಿಸಬೇಕು ಇಲ್ಲದೆ ಹೋದರೆ ಮುಂದಿನ ದಿನಗಳಲ್ಲಿ ತೋಟಗಾರಿಕೆ ಮತ್ತು ಕೃಷಿ ಇಲಾಖೆ ಕಛೇರಿಗಳಿಗೆ ಬೀಗ ಜಡಿದು ಧರಣಿ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು

ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ಮಾತನಾಡಿ ಸಿದ್ದರಾಮಯ್ಯ ಸರ್ಕಾರವು ಸದನದಲ್ಲಿ ಚರ್ಚಿಸಿ ಕೂಡಲೇ ಕೃಷಿ ಸಲಕರಣೆಗಳನ್ನು ಸಬ್ಸಿಡಿ ದರದಲ್ಲಿ ದೊರಕುವಂತೆ ಹೆಚ್ಚಿನ ಅನುದಾನ ಮೀಸಲಿಡಬೇಕು. ವಿಶೇಷವಾಗಿ ಸಣ್ಣ ಮತ್ತು ಅಲ್ಪ ಭೂದಾರ ರೈತರಿಗೆ ಹೆಚ್ಚುವರಿ ಸಬ್ಸಿಡಿ ನೀಡಿ, ತಾಲೂಕು ಮತ್ತು ಜಿಲ್ಲಾ ಮಟ್ಟದ ಕೃಷಿ ಯಂತ್ರೋಪಕರಣ ಕೇಂದ್ರಗಳ ಮೂಲಕ ಪಾರದರ್ಶಕವಾಗಿ ವಿತರಣೆ ಮಾಡುವ ವ್ಯವಸ್ಥೆಯನ್ನು ಬಲಪಡಿಸುವಂತೆ ಆಗ್ರಹಿಸಿದ್ದಾರೆ.

ರಾಜ್ಯಾದ್ಯಂದ ಕಬ್ಬು ಬೆಳೆಗಾರರಿಗೆ ಕಾಂಗ್ರೆಸ್ ಸರ್ಕಾರವು ಪ್ರತಿ ಟನ್‌ಗೆ ರೂ.೩,೩೦೦ ಮೌಲ್ಯವನ್ನು ನಿಗದಿ ಪಡಿಸಿದ್ದು, ಈ ದರವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸಕ್ಕರೆ ಕಾರ್ಖಾನೆಗಳ ಮೂಲಕ ಸಮಾನವಾಗಿ ಜಾರಿಗೆ ತರುವ ಕಾರ್ಯವಿಧಾನ ಸ್ಪಷ್ಟವಾಗಿಲ್ಲ. ಒಂದು ಜಿಲ್ಲೆಯಲ್ಲಿ ಕಡಿಮೆ ದರ, ಇನ್ನೊಂದು ಜಿಲ್ಲೆಯಲ್ಲಿ ಹೆಚ್ಚಿನ ದರ ನೀಡುವ ಅನ್ಯಾಯಗಳನ್ನು ತಪ್ಪಿಸಲು, ಪ್ರತಿ ಟನ್‌ಗೆ ರೂ. ೩,೩೦೦ ದರವನ್ನು ಎಲ್ಲೆಡೆ ಕಡ್ಡಾಯವಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು

ಪ್ರತಿಭಟನೆಯಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ, ಮುಖಂಡರಾದ ಸಿ.ಎಸ್ ವೆಂಕಟೇಶ್, ಎಸ್.ಬಿ ಮುನಿವೆಂಕಟಪ್ಪ, ಮಾಗೇರಿ ನಾರಾಯಣಸ್ವಾಮಿ, ಕೆಂಬೋಡಿ ನಾರಾಯಣಸ್ವಾಮಿ, ಶಿವಣ್ಣ, ಸೀಗೆಹಳ್ಳಿ ಸುಂದರ್, ವಿಜಯಕುಮಾರ್, ಮಮತಾ, ಕೃಷ್ಣಪ್ಪ, ಚಿನ್ನಸ್ವಾಮಿಗೌಡ, ತಿಮ್ಮರಾಯಪ್ಪ ಭಾಗವಹಿಸಿದ್ದರು.

ಚಿತ್ರ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ವಿರೋಧಿಸಿ ಕೋಲಾರದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್

You Might Also Like

ತುಮಕೂರು ದಸರಾ ಕ್ರೀಡಾ ಮಹೋತ್ಸವಕ್ಕೆ ಚಾಲನೆ
ಸಾಹಿತ್ಯ ಕ್ಷೇತ್ರಕ್ಕೆ ಹಲಸಂಗಿ ಗೆಳೆಯರ ಬಳಗದ ವಿಶೇಷ ಕೊಡುಗೆ
ಹಿಂದೂ-ಮುಸ್ಲಿಮರನ್ನು ಒಡೆಯುತ್ತಿರುವ ಸಿದ್ದರಾಮಯ್ಯ: ಆರ್.ಅಶೋಕ – Hindusthan Samachar Kannada
ಹಿಂದೂ ಕಾರ್ಯಕರ್ತನ ಬಂಧನ: ವಿಶ್ವ ಹಿಂದೂ ಪರಿಷತ್ ಧರಣಿ.
ಆರೋಗ್ಯ ವಿಮೆ ಪರಿಹಾರ ಸೇವಾ ನ್ಯೂನ್ಯತೆ ; ವಿಮಾ ಕಂಪನಿಗೆ ದಂಡ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಇಂಡಿಗೋ ವಿಮಾನಗಳ ಸಂಖ್ಯೆಯನ್ನು ಶೇ. 5ರಷ್ಟು ಕಡಿತಗೊಳಿಸಿದ ಡಿಜಿಸಿಎ
Next Article ನೇಪಾಳ ನೂತನ ಕಸ್ಟಮ್ಸ್ ಕಾನೂನಿಗೆ ವಿರೋಧ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?