
ಧಾರವಾಡ, 12 ಜನವರಿ(ಹಿ.ಸ):
ಆ್ಯಂಕರ್ :
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುವ ಹಾಗೂ ಅವರನ್ನು ಫಲಾನುಭವಿಗಳನ್ನಾಗಿಸುವ ಉದ್ದೇಶದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕರ್ನಾಟಕದಾದ್ಯಂತ ಯಶಸ್ವಿಯಾಗಿ ಮುಂದುವರೆದಿದೆ. ಧಾರವಾಡದ ರೊಟ್ಟಿವಾಡ ಗ್ರಾಮ ಪಂಚಾಯಿತಿಯಲ್ಲಿ ಸಂಕಲ್ಪ ಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸರ್ಕಾರದ ಯೋಜನೆಗಳಾದ ಪ್ರಧಾನ ಮಂತ್ರಿ ಉಜ್ವಲ ಯೋಜನೆ, ಕಿಸಾನ್ ಕ್ರೆಡಿಟ್ ಕಾರ್ಡ್, ನಬಾರ್ಡ್ ಸಂಸ್ಥೆ ನೀಡುವ ಯೋಜನೆಗಳ, ಪಿಎಂಎಫ್ಎಂಇ ಯೋಜನೆ, ಕುರಿತು ಮಾಹಿತಿ ನೀಡಲಾಯಿತು. ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು. ಫಲಾನುಭವಿ ಅನ್ನಪೂರ್ಣ ಮರಿಗೌಡರ ಸುದ್ದಿಗಾರರೊಂದಿಗೆ ತಮ್ಮ ಅನಿಸಿಕೆ ಹಂಚಿಕೊಂಡರು.
ಹಿಂದೂಸ್ತಾನ್ ಸಮಾಚಾರ್
