ಕಲಬುರಗಿ,21ನವೆಂಬರ್ (ಹಿ.ಸ):
ಆ್ಯಂಕರ್ :
: ವಿಪಕ್ಷ ನಾಯಕ ಆರ್ ಅಶೋಕ ಅವರು ಇಂದು (ನ.21) ಕಲಬುರಗಿ ಜಿಲ್ಲೆಯಲ್ಲಿಂದು ಬರ ವೀಕ್ಷಣೆ ಮಾಡಲಿದ್ದಾರೆ. ವಿಪಕ್ಷ ನಾಯಕರಾದ ಬಳಿಕ ಮೊದಲ ಬಾರಿಗೆ ಕಲಬುರಗಿ ಪ್ರವಾಸ ಕೈಗೊಂಡಿದ್ದು, ಬೆಳಿಗ್ಗೆ 9:30ಕ್ಕೆ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಲ್ಲಿಂದ ಕಲಬುರಗಿ ಗ್ರಾಮೀಣ ಮತಕ್ಷೇತ್ರ ವ್ಯಾಪ್ತಿಯ ಶ್ರೀನಿವಾಸ ಸರಡಗಿಯಲ್ಲಿ ಬರ ವೀಕ್ಷಣೆ ಮಾಡುತ್ತಾರೆ. ಬಳಿಕ ಆಳಂದ ತಾಲೂಕಿಗೆ ಭೇಟಿ ನೀಡಿ ಕಡಗಂಚಿ ಗ್ರಾಮದಲ್ಲಿ ಬರ ವೀಕ್ಷಣೆ ಮಾಡಲಿದ್ದಾರೆ. ನಂತರ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಂಜೆ 4:30 ಕಲಬುರಗಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ, ಕಾರ್ಯಕರ್ತರ ಜೊತೆ ಸಭೆ ಮಾಡಲಿದ್ದಾರೆ. ಬಳಿಕ ಬೀದರ್ಗೆ ತೆರಳಿ ವಾಸ್ತವ್ಯ ಹೂಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
