


ಬಳ್ಳಾರಿ, 20 ಜನವರಿ(ಹಿ.ಸ):
ಆ್ಯಂಕರ್: ಭಾರತದ ನಾಗರಿಕರಾದ ನಾವುಗಳು ಸಾರ್ವಭೌಮ, ಸಮಾಜವಾದಿ ಜಾತ್ಯಾತೀತ ಸೇರಿದಂತೆ ಸಂವಿಧಾನದ ಎಲ್ಲ ಆಶೋತ್ತರಗಳನ್ನು ನಿತ್ಯ ಜೀವನದಲ್ಲಿ ಅಳಡಿಸಿಕೊಂಡಲ್ಲಿ ದೇಶದ ಸಮಗ್ರ ಅಭಿವೃದ್ದಿ ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಬಳ್ಳಾರಿ ತಾಲ್ಲೂಕಿನ ಮೋಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆದ `ಡಾ.ಬಿ.ಆರ್ ಅಂಬೇಡ್ಕರವರ ಓದು’ನಲ್ಲಿ ಅವರು ಅವರು ಮಾತನಾಡಿದರು.
ಯುವ ಪೀಳಿಗೆ ಶಿಕ್ಷಣದ ಜೊತೆಗೆ ಕ್ರೀಡೆ, ಕಲೆ, ಸಂಗೀತ, ಸಾಹಿತ್ಯ, ಹೀಗೇ ವಿವಿಧ ಕೌಶಲ್ಯಗಳಲ್ಲಿ ಆಸಕ್ತಿ ಇಟ್ಟು ತಮ್ಮದೇ ಆದ ಆಯ್ಕೆಗಳನ್ನು ತೆಗೆದುಕೊಂಡು ಸಾಧನೆ ಮಾಡುವುದರ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದು ಹೇಳಿದರು.
ಓದು ಕಾರ್ಯಕ್ರಮದ ನಿಮಿತ್ಯ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಉಪನ್ಯಾಸಕ ಡಾ.ಹೆಚ್.ತಿಪ್ಪೇಸ್ವಾಮಿ, ಮೋಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಇಸ್ಮಾಯಿಲ್ ಮಕಂಧರ್, ಸಹ ಪ್ರಾಧ್ಯಾಪಕಿ ಡಾ.ಬಿ.ಜಿ.ಕಲಾವತಿ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
