ಬೆಂಗಳೂರು, 29 ಡಿಸೆಂಬರ್(ಹಿ.ಸ):
ಆ್ಯಂಕರ್ :
ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಆಗ್ರಹಿಸಿ ರಾಜಧಾನಿಯಲ್ಲಿ ಪ್ರತಿಭಟನೆ ಮಾಡಿ ಮಾಲ್ ಮತ್ತು ಹೋಟೆಲ್ಗಳ ಮೇಲೆ ಕಲ್ಲುತೂರಾಟ ನಡೆಸಿದ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಜನ ಕರವೇ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಸರ್ಕಾರದ ಈ ಕ್ರಮದ ವಿರುದ್ಧ ಕರವೇ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರು ಕೂಡ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂಥಹ ಪರಿಸ್ಥಿತಿ ತಮಿಳುನಾಡು, ಆಂಧ್ರಪ್ರದೇಶಕ್ಕೆ ಬಂದಿದ್ದರೇ ಅದರ ಕಥೆ ಬೇರೆಯಾಗುತ್ತಿತ್ತು. ಮುಖ್ಯಮಂತ್ರಿಗಳು ಈ ರೀತಿ ಮಾಡಿರುವುದು ಸರಿ ಅಲ್ಲ. ಅಧಿಕಾರದ ಖುರ್ಚಿ ಸಿಕ್ಕಿದೆ ಅಂಥ ಈ ರೀತಿ ಮಾಡಿದ್ದಾರೆ. ನಾವು ಇನ್ಮುಂದೆ ಸಹಿಸುವುದಿಲ್ಲ ನಮಗೂ ಸ್ವಾಭಿಮಾನ ಇದೆ. ಅಕ್ಕರೆಯ ಸ್ವಾಭಿಮಾನವೇ ನಮ್ಮ ಅಸ್ತ್ರ. ಸರ್ಕಾರ ಇದನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಡಾ. ದೊಡ್ಡರಂಗೇಗೌಡ ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್
