ಹೊಸಪೇಟೆ, 24 ಜನವರಿ(ಹಿ.ಸ):
ಆ್ಯಂಕರ್: ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆಯಿಂದ ಹಂಪಿ ಉತ್ಸವ 2023-24ರ ಪ್ರಯುಕ್ತ ಹಾಗೂ ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ 2023-24ರ ಅಂಗವಾಗಿ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಫೆ.03ರಂದು ಹಂಪಿ ಉತ್ಸವ ಕಾರ್ಯಕ್ರಮದಲ್ಲಿ ಏರ್ಪಡಿಸಲಾಗಿದೆ.
ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಜಿಲ್ಲೆಯ ಎಲ್ಲಾ ಸಾರ್ವಜನಿಕರು ಭಾಗವಹಿಸಲು ಅವಕಾಶವಿರುತ್ತದೆ. ಪ್ರತಿ ಸ್ಪರ್ಧಿಗೆ ಒಂದೇ ತಿನಿಸುಗಳಿಗೆ (ಅಡುಗೆ) ಸಿಹಿ ಅಥವಾ ಖಾರ ಮಾಡಲು ಅವಕಾಶವಿರುತ್ತದೆ. ಸ್ಪರ್ಧಿಗಳಿಗೆ 90 ನಿಮಿಷದ ಕಾಲಾವಕಾಶವಿರುತ್ತದೆ. ಸಿರಿಧಾನ್ಯ ಸಸ್ಯಹಾರಿ ತಿನಿಸುಗಳಿಗೆ ಮಾತ್ರ ಅವಕಾಶವಿರುತ್ತದೆ.
ತೀರ್ಪುಗಾರರ ನಿರ್ಧಾರವೇ ಅಂತಿಮವಾಗಿರುತ್ತದೆ. ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಸ್ಫರ್ಧಿಗಳು ನಿಗದಿಪಡಿಸಿದ ಸ್ಥಳದಲ್ಲಿ ತಮ್ಮ ಅಡುಗೆ ಸಾಮಗ್ರಿಗಳೊಂದಿಗೆ ಹಾಜರಿರಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾಳುಗಳ ಹೆಸರುಗಳನ್ನು ಜನವರಿ 28ರೊಳಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ವಿಜಯನಗರ ಜಿಲ್ಲೆ ಕಚೇರಿಯಲ್ಲಿ ನೋಂದಾಯಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರಾದ ಪ್ರಿಯಾಂಕ ಎಸ್-ಮೊ:8277929661, ಮಹಮ್ಮದ ಹಾರೂನ್ರಷೀದ್-8277929662 ಅವರಿಗೆ ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರಾದ ಶರಣಪ್ಪ ಬಿ ಮುದಗಲ್ ಅವರು ತಿಳಿಸಿದ್ದಾರೆ.
