ಮೈಸೂರು, 4 ಜನವರಿ(ಹಿ.ಸ):
ಆ್ಯಂಕರ್ :
: ನಂಜನಗೂಡು ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇಂದು ಕರೆ ನೀಡಿದ ಸ್ವಯಂಪ್ರೇರಿತ ನಂಜನಗೂಡು ಬಂದ್ಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೆಡಿಕಲ್ ಅಂಗಡಿ ಹೊರತು ಪಡಿಸಿ ಎಲ್ಲಾ ವ್ಯಾಪಾರ ಬಂದ್ ಮಾಡಿ ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ,
ದೇವಸ್ಥಾನದ ಸುತ್ತಮುತ್ತಲಿನ ಬೀದಿಗಳಲ್ಲಿ ವ್ಯಾಪಾರ ವಹಿವಾಟು ಆರಂಭವಾಗಿಲ್ಲ. ಬಂದ್ಗೆ ಬೆಂಬಲ ಕೊಡುವಂತೆ ನಂಜನಗೂಡಿನಲ್ಲಿ ನಂಜುಂಡೇಶ್ವರನ ಭಕ್ತರು ಕರ ಪತ್ರ ಹಂಚುತ್ತಿದ್ದಾರೆ.
ಈ ಪ್ರಕರಣದ ಕುರಿತು ದೇವಾಲಯದ ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್, ದೇವರಿಗೆ ಎರಚಿರುವುದು ಶುದ್ಧ ನೀರು ಎಂದು ಹೇಳಿಕೆ ನೀಡಿದ್ದರು. ನಾಗಚಂದ್ರ ದೀಕ್ಷಿತ್ ಎಡಿಸಿ ನೇತೃತ್ವದ ಶಾಂತಿ ಸಭೆಯಲ್ಲಿ ಭಾಗಿಯಾಗಿದ್ದು, ಸಭೆ ನಂತರ ಉತ್ಸವ ಮೂರ್ತಿಗೆ ಶುದ್ಧ ನೀರು ಎರಚಿದ್ದಾರೆ ಎಂದು ಹೇಳಿದ್ದರು. ಬಳಿಕ ತಮ್ಮ ಹೇಳಿಕೆಯಿಂದ ಉಲ್ಟಾ ಹೊಡೆದಿದ್ದು ಹೇಳಿಕೆ ಕುರಿತು ಸ್ಪಷ್ಟನೆ ಕೊಟ್ಟಿದ್ದಾರೆ.
ತಾಲೂಕು ದಂಡಾಧಿಕಾರಿಗಳ ನೇತೃತ್ವದ ಸಭೆಯಲ್ಲಿ ಒಂದು ಪತ್ರ ನೀಡಿ ಸಹಿ ಹಾಕುವಂತೆ ಒತ್ತಾಯಿಸಿದರು. ಹೀಗಾಗಿ ನಾವು ಮೂವರು ಆ ಪತ್ರಕ್ಕೆ ಸಹಿ ಹಾಕಿದ್ದೇವೆ. ನಾವು ಸರ್ಕಾರಿ ನೌಕರರು. ಹೀಗಾಗಿ ಅಧಿಕಾರಿಗಳ ಮಾತಿಗೆ ಬೆಲೆ ಕೊಟ್ಟು ಸಹಿ ಮಾಡಿದ್ದೇವೆ. ನಂಜನಗೂಡಿನ ಜನತೆಗೆ ಈ ಪ್ರಕರಣ ಗೊತ್ತಿದೆ. ಅವರೇ ಇತ್ಯರ್ಥ ಮಾಡಿಕೊಳ್ಳಬೇಕು ಎನ್ನುವ ಮೂಲಕ ಬಂದ್ಗೆ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
