ಬೆಂಗಳೂರು, 16 ಅಕ್ಟೋಬರ್ (ಹಿ.ಸ):
ಆ್ಯಂಕರ್ : ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ ಬೆಳಿಗ್ಗೆ 11.00 ಗಂಟೆಗೆ ಬಿಜೆಪಿ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಡಿ.ವಿ. ಸದಾನಂದಗೌಡ, ರಾಜ್ಯದ ಮಾಜಿ ಸಚಿವರಾದ ಆರ್ ಅಶೋಕ್, ಸಿ.ಎನ್. ಅಶ್ವತ್ಥನಾರಾಯಣ್, ಕೆ ಗೋಪಾಲಯ್ಯ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರು ಮತ್ತು ಸಂಸದರಾದ ತೇಜಸ್ವಿ ಸೂರ್ಯ, ಬೆಂಗಳೂರಿನ ಶಾಸಕರು , ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು , ಮಾಜಿ ಮೇಯರ್, ಬಿಬಿಎಂಪಿ ಮಾಜಿ ಸದಸ್ಯರುಗಳು ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
