
ಬೆಂಗಳೂರು,25ನವೆಂಬರ್ (ಹಿ.ಸ):
ಆ್ಯಂಕರ್ :
ನವೆಂಬರ್ 28 ರವರೆಗೆ ರಾಜ್ಯದಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು (ನ.25) ಸಾಧಾರಣ ಮಳೆಯಾಗಲಿದೆ. ಕಳೆದ 24 ಗಂಟೆಯಲ್ಲಿ ತುಮಕೂರು, ಗುಬ್ಬಿ ಮತ್ತು ಅಡಗೂರಿನಲ್ಲಿ 59.5 ಮಿಮೀ ಮಳೆಯಾಗಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಒಳನಾಡಿ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಂಡ್ಯ ಜಿಲ್ಲೆಯಲ್ಲಿ ಒಣಹವೆ ಬೀಸಲಿದೆ.
ಹಿಂದೂಸ್ತಾನ್ ಸಮಾಚಾರ್
