ನವದೆಹಲಿ, 28ಅಕ್ಟೋಬರ್ (ಹಿ.ಸ):
ಆ್ಯಂಕರ್ :
ವಿಶ್ವಕಪ್ನಲ್ಲಿ ಇಂದು ಅಂದರೆ ಅಕ್ಟೋಬರ್ 28 ರ ಶನಿವಾರದಂದು ಡಬಲ್ ಹೆಡರ್ ಇದೆ. ಅಂದರೆ ಒಂದೇ ದಿನ ಎರಡು ಪಂದ್ಯಗಳು ನಡೆಯಲ್ಲಿವೆ. ದಿನದ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯ, ನ್ಯೂಜಿಲೆಂಡ್ ತಂಡದ ವಿರುದ್ಧ ಕಣಕ್ಕಿಳಿದರೆ, ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ನೆದರ್ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ . ಕಿವೀಸ್ ಎಂಟು ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ಮತ್ತೊಂದೆಡೆ, ಆಸ್ಟ್ರೇಲಿಯಾ 6 ಅಂಕಗಳೊಂದಿಗೆ ನ್ಯೂಜಿಲೆಂಡ್ ನಂತರದ ಸ್ಥಾನದಲ್ಲಿದೆ.
ಮತ್ತೊಂದೆಡೆ, ವಿಶ್ವಕಪ್ನಲ್ಲಿ ತುಲನಾತ್ಮಕವಾಗಿ ದುರ್ಬಲವಾಗಿರುವ ಎರಡು ತಂಡಗಳಾದ ಬಾಂಗ್ಲಾದೇಶ ಮತ್ತು ನೆದರ್ಲ್ಯಾಂಡ್ ಒಂದೇ ಪರಿಸ್ಥಿತಿಯಲ್ಲಿವೆ. ಉಭಯ ತಂಡಗಳು ಇದುವರೆಗೆ ಐದು ಪಂದ್ಯಗಳನ್ನು ಆಡಿದ್ದು, ಕೇವಲ ಒಂದು ಪಂದ್ಯದಲ್ಲಿ ಮಾತ್ರ ಗೆಲುವು ಕಂಡಿವೆ. ಹೀಗಾಗಿ ಎರಡು ತಂಡಗಳಿಗೂ ಈ ಪಂದ್ಯದ ಗೆಲುವು ಅತ್ಯವಶ್ಯಕವಾಗಿದೆ.
ಹಿಂದೂಸ್ತಾನ್ ಸಮಾಚಾರ್
