ಪುಣೆ,8 ನವೆಂಬರ್ (ಹಿ.ಸ):
ಆ್ಯಂಕರ್ :ವಿಶ್ವಕಪ್ 2023 ರ 40 ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನೆದರ್ಲ್ಯಾಂಡ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಬಾರಿಯ ವಿಶ್ವಕಪ್ನಿಂದ ಈಗಾಗಲೇ ಈ ಉಭಯ ತಂಡಗಳು ಹೊರಬಿದ್ದಿರುವುದರಿಂದ ಈ ಪಂದ್ಯ ಕೇವಲ ಔಪಚಾರಿಕವಾಗಿದೆ. ಈ ಬಾರಿಯ ವಿಶ್ವಕಪ್ನಲ್ಲಿ ಹೀನಾಯ ಪ್ರದರ್ಶನ ನೀಡಿರುವ ಇಂಗ್ಲೆಂಡ್ ಇದುವರೆಗೆ ಆಡಿರುವ 7 ಪಂದ್ಯಗಳಲ್ಲಿ 1ರಲ್ಲಿ ಮಾತ್ರ ಜಯ ಸಾಧಿಸಿದೆ. ಆದರೆ ನೆದರ್ಲ್ಯಾಂಡ್ಸ್ ತಂಡ ಆಡಿರುವ 7 ಪಂದ್ಯಗಳಲ್ಲಿ 2 ರಲ್ಲಿ ಗೆದ್ದಿದೆ. ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ನೆದರ್ಲೆಂಡ್ಸ್ ಈ ವಿಶ್ವಕಪ್ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಹಾಲಿ ಚಾಂಪಿಯನ್ನರನ್ನು ಮಣಿಸುವ ಇರಾದೆಯೊಂದಿಗೆ ನೆದರ್ಲೆಂಡ್ಸ್ ತಂಡ ಕಣಕ್ಕಿಳಿಯುತ್ತಿದೆ. ಉಭಯ ತಂಡಗಳ ಈ ಕದನ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲ್ಲಿದೆ.
ಹಿಂದೂಸ್ತಾನ್ ಸಮಾಚಾರ್
