ಹೈದರಾಬಾದ್, 25 ಜನವರಿ(ಹಿ.ಸ):
ಆ್ಯಂಕರ್ :
ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಇಂದಿನಿಂದ ಶುರುವಾಗಲಿದೆ. ಐದು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ಹೈದರಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿದೆ. ಟೆಸ್ಟ್ ಕ್ರಿಕೆಟ್ನಲ್ಲಿ ಉಭಯ ತಂಡಗಳು ಇದುವರೆಗೆ 131 ಪಂದ್ಯಗಳನ್ನಾಡಿದ್ದು, ಈ ವೇಳೆ ಇಂಗ್ಲೆಂಡ್ ತಂಡವು 50 ರಲ್ಲಿ ಜಯ ಸಾಧಿಸಿದೆ. ಇನ್ನು ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 31 ಪಂದ್ಯಗಳಲ್ಲಿ ಮಾತ್ರ. ಹಾಗೆಯೇ 50 ಪಂದ್ಯಗಳು ಡ್ರಾನಲ್ಲಿ ಅಂತ್ಯ ಕಂಡಿದೆ.
ಇನ್ನು ಉಭಯ ತಂಡಗಳು ಕೊನೆಯ ಬಾರಿಗೆ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಿದ್ದು 2022 ರಲ್ಲಿ. ಎರಡು ವರ್ಷಗಳ ಹಿಂದೆ ಇಂಗ್ಲೆಂಡ್ನಲ್ಲಿ ನಡೆದಿದ್ದ 5 ಪಂದ್ಯಗಳ ಈ ಸರಣಿಯು 2-2 ಅಂತರದಿಂದ ಕೊನೆಗೊಂಡಿತ್ತು. ಇದೀಗ ಮತ್ತೊಮ್ಮೆ ಐದು ಪಂದ್ಯಗಳ ಸರಣಿಯೊಂದಿಗೆ ಉಭಯ ತಂಡಗಳು ಮುಖಾಮುಖಿಯಾಗುತ್ತಿದೆ. ಹೀಗಾಗಿ ಈ ಸರಣಿಯಲ್ಲೂ ಎರಡೂ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.
ಸ್ಟಾರ್ ಆಟಗಾರರು ಅಲಭ್ಯ:
ಹೈದರಾಬಾದ್ನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಕೊಹ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹಿಂದೆ ಸರಿದಿದ್ದಾರೆ. ಹಾಗೆಯೇ ಇಂಗ್ಲೆಂಡ್ ತಂಡದ ಸ್ಪೋಟಕ ಬ್ಯಾಟರ್ ಹ್ಯಾರಿ ಬ್ರೂಕ್ ಕೂಡ ವೈಯುಕ್ತಿಕ ಕಾರಣಗಳಿಂದಾಗಿ ಈ ಸರಣಿಯಿಂದ ಹೊರಗುಳಿದಿದ್ದಾರೆ. ಇಲ್ಲಿ ಬ್ರೂಕ್ ಬದಲಿಗೆ ಡಾನ್ ಲಾರೆನ್ಸ್ ಆಯ್ಕೆಯಾಗಿದ್ದರೆ, ಅತ್ತ ವಿರಾಟ್ ಕೊಹ್ಲಿ ಬದಲಿ ಆಟಗಾರನಾಗಿ ರಜತ್ ಪಾಟಿದಾರ್ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
