ಮೊಹಾಲಿ, 11 ಜನವರಿ(ಹಿ.ಸ):
ಆ್ಯಂಕರ್ :ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟಿ20 ಸರಣಿಯು ಇಂದಿನಿಂದ (ಜ.11) ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ ಮೊಹಾಲಿಯಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಇಂದಿನ ಪಂದ್ಯದಲ್ಲಿ ಕೊಹ್ಲಿ ಕಣಕ್ಕಿಳಿಯುತ್ತಿಲ್ಲ. ಅತ್ತ ಅಫ್ಘಾನಿಸ್ತಾನ್ ತಂಡದ ಆಲ್ರೌಂಡರ್ ರಶೀದ್ ಖಾನ್ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರು ಕೂಡ 3 ಪಂದ್ಯಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ.
ಎಷ್ಟು ಗಂಟೆಗೆ ಪಂದ್ಯ ಶುರು?
ಈ ಸರಣಿ ಮೊದಲ ಪಂದ್ಯಕ್ಕೆ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಶುರುವಾಗಲಿದೆ. ಅದಕ್ಕೂ ಮುನ್ನ 6.30 ಕ್ಕೆ ಟಾಸ್ ಪ್ರಕ್ರಿಯೆ ಜರುಗಲಿದೆ.
ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
ಈ ಪಂದ್ಯದ ನೇರ ಪ್ರಸಾರವು ಸ್ಪೋರ್ಟ್ಸ್ 18 ಚಾನೆಲ್ನಲ್ಲಿ ಇರಲಿದೆ. ಹಾಗೆಯೇ ಜಿಯೋ ಸಿನಿಮಾ ಆ್ಯಪ್ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.
ಹಿಂದೂಸ್ತಾನ್ ಸಮಾಚಾರ್
