ದೆಹಲಿ, 25ಅಕ್ಟೋಬರ್ (ಹಿ.ಸ):
ಆ್ಯಂಕರ್ :
2023ರ ಏಕದಿನ ವಿಶ್ವಕಪ್ನಲ್ಲಿ ಇಂದು ಅಂದರೆ, ಅಕ್ಟೋಬರ್ 25 ರಂದು ಆಸ್ಟ್ರೇಲಿಯಾ ಮತ್ತು ನೆದರ್ಲೆಂಡ್ಸ್ ನಡುವೆ ಪಂದ್ಯ ನಡೆಯುತ್ತಿದೆ. ಈ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಗೆಲ್ಲುವ ಫೆವರೇಟ್ ಎನಿಸಿದರೂ, ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ನೆದರ್ಲೆಂಡ್ಸ್ ಕೂಡ ಆತ್ಮವಿಶ್ವಾಸದಿಂದ ಬೀಗುತ್ತಿದೆ. ಆದ್ದರಿಂದ ಈ ಪಂದ್ಯದಲ್ಲಿ ಯಾವುದೇ ತಂಡವನ್ನು ಕಡಿಮೆ ಅಂದಾಜು ಮಾಡುವಂತಿಲ್ಲ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದರೆ ಸೆಮಿಫೈನಲ್ ಹಾದಿ ಸುಲಭವಾಗಲಿದೆ. ಆರಂಭಿಕ ಎರಡು ಪಂದ್ಯಗಳಲ್ಲಿ ಸೋತ ನಂತರ, ಆಸ್ಟ್ರೇಲಿಯಾ ಅದ್ಭುತ ಪುನರಾಗಮನವನ್ನು ಮಾಡಿದೆ.
ಹಿಂದೂಸ್ತಾನ್ ಸಮಾಚಾರ್
