ದುಬೈ, 18 ಡಿಸೆಂಬರ್(ಹಿ.ಸ):
ಆ್ಯಂಕರ್ :
ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2024 ಹರಾಜಿಗೆ ಕ್ಷಣಗಣನೆ ಆರಂಭವಾಗಿದೆ. ಇನ್ನು ಕೇವಲ ಒಂದು ದಿನವಷ್ಟೇ ಬಾಕಿಯಿದೆ. ಭಾರತ ಮತ್ತು ವಿದೇಶಿ ಆಟಗಾರರು ಸೇರಿ ಒಟ್ಟು 333 ಆಟಗಾರರು ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಪೈಕಿ ಭಾರತದಿಂದ 214 ಹಾಗೂ ವಿದೇಶದಿಂದ 119 ಆಟಗಾರರು ಭಾಗವಹಿಸಲಿದ್ದಾರೆ. ಐಪಿಎಲ್ 2024 ರ ಸೀಸನ್ ‘ಮಿನಿ ಹರಾಜು’ ಆಗಿದೆ. ಏಕೆಂದರೆ 2025 ರ ಸೀಸನ್ಗಾಗಿ ಮೆಗಾ ಹರಾಜು ಆಯೋಜಿಸಲಾಗುತ್ತದೆ. ಈ ಬಾರಿಯದ್ದು ಮಿನಿ ಹರಾಜಾಗಿದ್ದರೂ ಸಾಕಷ್ಟು ಕುತೂಹಲ ಕೆರಳಿಸಿದೆ. 20 ಕೋಟಿಯ ವರೆಗೆ ಬಿಡ್ ನಡೆಯಲಿದೆ ಎಂದು ಹೇಳಲಾಗುತ್ತಿದೆ. 2024 ರ ಐಪಿಎಲ್ ಹರಾಜು ಡಿಸೆಂಬರ್ 19 ರಂದು ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್
