ಧರ್ಮಶಾಲಾ, 17ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಐಸಿಸಿ ಏಕದಿನ ವಿಶ್ವಕಪ್ ರೋಚಕತೆ ಸೃಷ್ಟಿಸುತ್ತಿದೆ. ಇಂದು ನಡೆಯಲಿರುವ ಹದಿನೈದನೇ ಪಂದ್ಯದಲ್ಲಿ ಟೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ಹಾಗೂ ಸ್ಕಾಟ್ ಎಡ್ವರ್ಡ್ಸ್ ನೇತೃತ್ವದ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿ ಆಗುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಈ ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ.
ಭರ್ಜರಿ ಫಾರ್ಮ್ನಲ್ಲಿ ಹರಿಣಗಳು:
ಶ್ರೀಲಂಕಾ ವಿರುದ್ಧ 428 ರನ್ ಹಾಗೂ ಆಸ್ಟ್ರೇಲಿಯಾ ವಿರುದ್ಧ 311 ರನ್ಗಳ ಬೃಹತ್ ರನ್ ಕಲೆಹಾಕಿದ ಹರಿಣಗಳು ಭರ್ಜರಿ ಫಾರ್ಮ್ನಲ್ಲಿದ್ದಾರೆ. ಕ್ವಿಂಟನ್ ಡಿ ಕಾಕ್ ಎರಡೂ ಪಂದ್ಯಗಳಲ್ಲಿ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ರಾಸ್ಸಿ ವ್ಯಾನ್ ಡೆರ್ ಡುಸೆನ್, ಕ್ಲಾಸೆನ್ ಮತ್ತು ಐಡೆನ್ ಮಾರ್ಕ್ರಾಮ್ ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದಾರೆ. ನಾಯಕ ಬವುಮಾ ಫಾರ್ಮ್ಗೆ ಮರಳಬೇಕು. ಬೌಲಿಂಗ್ನಲ್ಲೂ ಆಫ್ರಿಕಾನ್ನರು ಲಯ ಕಂಡುಕೊಂಡಿದ್ದಾರೆ. ಕಗಿಸೊ ರಬಾಡ, ಎನ್ಗಿಡಿ, ರಬಾಡ, ಮಹರಾಜ್, ಜಾನ್ಸೆನ್ರಂತಹ ಅಪಾಯಕಾರಿ ಬೌಲರ್ಗಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
