ಗುವಾಹಟಿ27 ನವೆಂಬರ್ (ಹಿ.ಸ):
ಆ್ಯಂಕರ್ :
ತಿರುವನಂತಪುರಂನ ಗ್ರೀನ್ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ ಭರ್ಜರಿ ಜಯ ಸಾಧಿಸಿದೆ. ಬ್ಯಾಟಿಂಗ್ನಲ್ಲಿ ಮಿಂಚಿನ ಪ್ರದರ್ಶನ ನೀಡಿದ ಸೂರ್ಯ ಹುಡುಗರು 235 ರನ್ ಕಲೆಹಾಕಿದರೆ, ಆಸೀಸ್ 191 ರನ್ ಗಳಿಸಲಷ್ಟೇ ಶಕ್ತವಾಯಿತು. 44 ರನ್ಗಳ ಅಮೋಘ ಜಯದೊಂದಿಗೆ ಟೀಮ್ ಇಂಡಿಯಾ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಪಡೆದುಕೊಂಡಿದೆ. ಇನ್ನೊಂದು ಪಂದ್ಯ ಗೆದ್ದರೆ ಭಾರತ ಸರಣಿ ವಶಪಡಿಸಿಕೊಳ್ಳಲಿದೆ. ಹಾಗಾದರೆ, ಇಂಡೋ-ಆಸೀಸ್ ತೃತೀಯ ಟಿ20 ಯಾವಾಗ?, ಎಲ್ಲಿ ನಡೆಯಲಿದೆ. ಇಲ್ಲಿದೆ ಮಾಹಿತಿ.
ನವೆಂಬರ್ 28 ಮಂಗಳವಾರದಂದು ಭಾರತ – ಆಸ್ಟ್ರೇಲಿಯಾ ತೃತೀಯ ಟಿ20 ಪಂದ್ಯ ನಡೆಯಲಿದೆ.
ಭಾರತ-ಆಸ್ಟ್ರೇಲಿಯಾ ತೃತೀಯ ಟಿ20 ಪಂದ್ಯ ಎಲ್ಲಿ ಆಡಲಾಗುತ್ತದೆ?
ಭಾರತ ಮತ್ತು ಆಸ್ಟ್ರೇಲಿಯಾ ತೃತೀಯ ಟಿ20 ಪಂದ್ಯ ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ದ್ವಿತೀಯ ಟಿ20 ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7 ಗಂಟೆಗೆ ಆರಂಭವಾಗಲಿದೆ.
ಉಳಿದ ಪಂದ್ಯ ಯಾವಾಗ?:
ಶುಕ್ರವಾರ, 1 ಡಿಸೆಂಬರ್- ಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣ, ರಾಯ್ಪುರ
ಭಾನುವಾರ, 3 ಡಿಸೆಂಬರ್- ಎಮ್. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಕ್ರೀಡಾಂಗಣ, ಬೆಂಗಳೂರು
ಉಭಯ ತಂಡಗಳು:
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.
ಆಸ್ಟ್ರೇಲಿಯಾ ತಂಡ: ಮ್ಯಾಥ್ಯೂ ವೇಡ್ (ನಾಯಕ), ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್ವೆಲ್, ಮ್ಯಾಟ್ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಜೋಶ್ ಇಂಗ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಸ್ಪೆನ್ಸರ್ ಜಾನ್ಸನ್, ಆ್ಯಡಂ ಝಂಪಾ, ತನ್ವೀರ್ ಸಂಘ.
ಹಿಂದೂಸ್ತಾನ್ ಸಮಾಚಾರ್
