
ಮುಂಬೈ,14ನವೆಂಬರ್ (ಹಿ.ಸ):
ಆ್ಯಂಕರ್ :
ಐಸಿಸಿ ಏಕದಿನ ವಿಶ್ವಕಪ್ 2023ರ ಲೀಗ್ ಪಂದ್ಯವನ್ನು ಒಂದೇ ಒಂದು ಸೋಲಿಲ್ಲದೆ ಅದ್ಭುತವಾಗಿ ಮುಗಿಸಿರುವ ಭಾರತ ಕ್ರಿಕೆಟ್ ತಂಡ ಇದೀಗ ಸೆಮಿಫೈನಲ್ಗೆ ಸಜ್ಜಾಗುತ್ತಿದೆ. ಬುಧವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ. ಈ ಮ್ಯಾಚ್ಗಾಗಿ ಟೀಮ್ ಇಂಡಿಯಾ ಪ್ಲೇಯರ್ಸ್ ಮುಂಬೈ ತಲುಪಿದ್ದಾರೆ. ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ಉಳಿದ ಎಲ್ಲ ಆಟಗಾರರು ಜೊತೆಯಾಗಿ ಬೆಂಗಳೂರಿನಿಂದ ಸೋಮವಾರ ಸಂಜೆ ವೇಳೆಗೆ ಮುಂಬೈ ತಲುಪಿದರು. ಕೊಹ್ಲಿ ಇವರಿಗಿಂತ ಮುಂಚಿತವಾಗಿ ಒಬ್ಬರೇ ಮುಂಬೈಗೆ ಪ್ರಯಾಣಿಸಿದ್ದರು. ಇಂದು ಎಲ್ಲ ಆಟಗಾರರು ತರಭೇತಿಯಲ್ಲಿ ಪಾಲ್ಗೊಳ್ಳಲಿದ್ದು, ಮಹತ್ವದ ಪಂದ್ಯಕ್ಕೆ ಗೇಮ್ ಪ್ಲಾನ್ ರೂಪಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
